ಧಾರಾಕಾರ ಮಳೆಗೆ ನಂದಗಾಂವಹಿಅವರಾದಿ ಸೇತುವೆ ಜಲಾವೃತ
Nandgaon-Hiavaradi bridge submerged due to heavy rain
ಲೋಕದರ್ಶನ ವರದಿ
ವರದಿ : ಹನಮಂತ ನಾವಿ
ಮಹಾಲಿಂಗಪುರ, ಜು. 11 : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಮಹಾಲಿಂಗಪುರ ಸಮೀಪದ ನಂದಗಾಂವಹಿಅವರಾದಿ ಸಂಪರ್ಕ ಸೇತುವೆ ಬುಧವಾರ ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆ ಮೇಲಿನ ಸಂಚಾರವನ್ನು ಆಡಳಿತ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಈ ಬೆಳವಣಿಗೆಯಿಂದ ಗಡಿಭಾಗದ ಗ್ರಾಮಗಳ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸೇತುವೆ ಮೇಲಿಂದ ಸುಮಾರು ಮೂರುರಿಂದ ನಾಲ್ಕು ಅಡಿಗೂ ಅಧಿಕ ಪ್ರಮಾಣದಲ್ಲಿ ನೀರು ವೇಗವಾಗಿ ಹರಿಯುತ್ತಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಸೇತುವೆ ದಾಟಲು ಪ್ರಯತ್ನಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸೇತುವೆ ಮುಳುಗಡೆಯ ಪರಿಣಾಮ ಮಹಾಲಿಂಗಪುರದಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ, ಅಳ್ಳಿಮಟ್ಟಿ, ಯರಗುದ್ರಿ, ಹೊಸ ಯರಗುದ್ರಿ, ತಿಮ್ಮಾಪುರ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ದಿನನಿತ್ಯ ಶಾಲೆ, ಕಾಲೇಜು, ಉದ್ಯೋಗ ಹಾಗೂ ವ್ಯಾಪಾರ ವಹಿವಾಟಿಗಾಗಿ ಈ ಮಾರ್ಗವನ್ನು ಅವಲಂಬಿಸಿರುವ ಜನರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಪರಿಸ್ಥಿತಿ ಎದುರಾಗಿದೆ.
ಇನ್ನೊಂದೆಡೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಹಿಡಕಲ್ ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗರಿಷ್ಠ 51 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಬುಧವಾರ ಸುಮಾರು 13 ಟಿಎಂಸಿ ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 26,393 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸದ್ಯಕ್ಕೆ ಹೊರಹರಿವು ಆರಂಭಿಸಿಲ್ಲ ಎಂದು ನೀರಾವರಿ ಇಲಾಖೆ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 