ನಂದಿಹಳ್ಳಿ : ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ
Nandihalli: Kanthi Basaveshwara Swamy Chariot Festival
ಹೂವಿನಹಡಗಲಿ :25- ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಗೊಂಬೆ ಕುಣಿತ ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ಕಂಠಿ ಯುವರಾಜ ಗೆ ?1.60 ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು.ಶಾಸಕ ಕೃಷ್ಣನಾಯ್ಕ, ಸಿಪಿಐ ದೀಪಕ್ ಬೋಸ ರೆಡ್ಡಿ ಮತ್ತು ಕಂಠಿಬಸವೇಶ್ವರ ಟ್ರಸ್ಟ್ ಕಮಿಟಿ ಅದ್ಯಕ್ಷ ವಿ.ಬಿ.ಕರಿಬಸವರಾಜ ಪದಾಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು. ನಂದಿಹಳ್ಳಿ ಸುತ್ತಮುತ್ತಲ ಗ್ರಾಮಗಳ ಅಪಾರ ಜನರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 