ಜಲ ಸಂರಕ್ಷಣೆಯಲ್ಲಿ ನರಗುಂದ ತಾಲೂಕು ಪ್ರಥಮ ಽ ದೇಶದಲ್ಲೇ 4ನೇ ಸ್ಥಾನ ಽ ಗದಗ ಜಿಲ್ಲಾ ಕೇಂದ್ರದಿಂದ 25 ಲಕ್ಷ ರೂಪಾಯಿಗಳ ನಗದು ಬಹುಮಾನ
Naragund Taluk ranks first in water conservation, 4th in the country, 25 lakh rupees cash prize from
ಜಲ ಸಂರಕ್ಷಣೆಯಲ್ಲಿ ನರಗುಂದ ತಾಲೂಕು ಪ್ರಥಮ ಽ ದೇಶದಲ್ಲೇ 4ನೇ ಸ್ಥಾನ ಽ ಗದಗ ಜಿಲ್ಲಾ ಕೇಂದ್ರದಿಂದ 25 ಲಕ್ಷ ರೂಪಾಯಿಗಳ ನಗದು ಬಹುಮಾನ
ನರಗುಂದ 11: ಜಲಶಕ್ತಿ ಅಭಿಯಾನದ ಮಹತ್ವದ ಭಾಗವಾಗಿರುವ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ನರಗುಂದ ತಾಲೂಕು ಐತಿಹಾಸಿಕ ಸಾಧನೆ ಮಾಡುವ ಮೂಲಕ ಗದಗ ಜಿಲ್ಲೆಗೆ ಕೀರ್ತಿ ತಂದಿದೆ. ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕು ಪ್ರಥಮ ಸ್ಥಾನ ಗಳಿಸಿದ್ದು, ದೇಶದ 780 ಜಿಲ್ಲೆಗಳಲ್ಲಿ (ಝೇನ್ 3, ಕೆಟಗರಿ 3 ರಲ್ಲಿ) ಗದಗ ಜಿಲ್ಲೆ ನಾಲ್ಕನೇ ಸ್ಥಾನ ಪಡೆಯಲು ನರಗುಂದ ತಾಲೂಕು ಪ್ರಮುಖವಾದ ಕೊಡುಗೆ ನೀಡಿದೆ.
ಈ ಮೂಲಕ ಗದಗ ಜಿಲ್ಲೆ ಕೇಂದ್ರದಿಂದ 25 ಲಕ್ಷ ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ. ನೀರಿಗಾಗಿ ಒಂದಾಗಿ ಪ್ರತಿ ಹನಿ ನೀರನ್ನು ಸಂರಕ್ಷಿಸಿ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ನೀರಿನ ಗುಣಮಟ್ಟವನ್ನು ಸುಧಾರಿಸುವುದು, ನೀರಿನ ಕೊರತೆಯ ಸವಾಲಿಗೆ ಸಮುದಾಯದ ಸಹಭಾಗಿತ್ವದೊಂದಿಗೆ ಸಮರ್ಥ ಪರಿಹಾರವನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿತ್ತು.ನರಗುಂದ ತಾಲೂಕಿನಿಂದ 4029 ಕಾಮಗಾರಿಗಳ ಮಾಹಿತಿಯನ್ನು ಜಲಸಂಚಾಯಿ ಜನಭಾಗಿದಾರಿ 1.0 ಪೋರ್ಟಲ್ ನಲ್ಲಿ ಅಪಲೋಡ ಮಾಡಲಾಗಿದೆ. ಗದಗ ಜಿಲ್ಲೆಯಿಂದ ಒಟ್ಟು 11971 ಕಾಮಗಾರಿಗಳನ್ನು ಅಪಲೋಡ್ ಮಾಡಲಾಗಿದ್ದು, ಅದರಲ್ಲಿ ಲಕ್ಷ್ಮೇಶ್ವರ-353, ಮುಂಡರಗಿ-1272, ರೋಣ-2669, ಗಜೇಂದ್ರಗಡ-74, ಶಿರಹಟ್ಟಿ-45 ಹಾಗೂ ಗದಗ ತಾಲೂಕಿನಿಂದ 3529 ಜಲಸಂರಕ್ಷಣೆಯ ಕಾಮಗಾರಿಗಳ ಪೋಟೋಗಳನ್ನು ಅಪಲೋಡ್ ಮಾಡಲಾಗಿದೆ.
ಈ ವೇಳೆ ನರಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಲ್ಲಿ ಕೈಗೊಂಡ ಜಲಸಂರಕ್ಷಣೆಯ ಕಾಮಗಾರಿಗಳಿಗೆ ಭೇಟಿ ನೀಡಿ ಪರೀಶೀಲಿಸಿ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಉನ್ನತ ಮಾನದಂಡಗಳನ್ನು ಪೂರೈಸಿರುವುದು ಖಚಿತಪಡಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೆ ಗದಗ ಜಿಲ್ಲೆಗೆ ಈ ಪ್ರಶಸ್ತಿ ಬರಲು ಕಾರಣವಾಗಿದೆ.
ಕೋಟ್ -01
ಮಾನವ ದಿನಗಳ ಸೃಜನೆಯಲ್ಲಿ ಗದಗ ಜಿಲ್ಲೆಗೆ ನರಗುಂದ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ನರೇಗಾ ಕೂಲಿಕಾರರ ಇ-ಕೆವೈಸಿ ಕಾರ್ಯದಲ್ಲೂ ನರಗುಂದ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಸದ್ಯ ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಗದಗ ಜಿಲ್ಲೆಗೆ ನರಗುಂದ ತಾಲೂಕು ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ತಾಲೂಕಿನ ನರೇಗಾ ಸಿಬ್ದಂದಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಶ್ರಮವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಟಾನ ಮಾಡಿರುವುದು ಪ್ರಶಂಸೆನೀಯ. ನರಗುಂದ ತಾಲೂಕಿನಿಂದ ಜಿಲ್ಲೆಯಲ್ಲೇ ಅತೀ ಹೆಚ್ಚು ಕಾಮಗಾರಿಗಳ ಪೋಟೋಗಳನ್ನು ಅಪಲೋಡ್ ಮಾಡಲಾಗಿದೆ. ಹೀಗಾಗಿ ಗದಗ ಜಿಲ್ಲೆ ದೇಶದಲ್ಲಿ ಪ್ರಥಮ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಎಸ್.ಕೆ.ಇನಾಮದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ ನರಗುಂದ
ಕೋಟ್-2
ನರಗುಂದ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ.
ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲು ನರಗುಂದ ತಾಲೂಕಿನ ಕೊಡುಗೆ ಅಪಾರ. ಜಿಲ್ಲೆಯಲ್ಲಿ ನಾವು ಪ್ರಥಮ ಸ್ಥಾನ ದೊರೆತಿರುವುದು ನಮಗೆ ಮತ್ತಷ್ಟು ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಪ್ರೋತ್ಸಾಹಕವಾಗಿದೆ. ಸದರಿ ಅಭಿಯಾನಧಡಿ ಶ್ರಮಿಸಿದ ಮನರೇಗಾ ತಂಡಕ್ಕೆ ಹಾಗೂ ತಾಲೂಕಿನ ಎಲ್ಲ ಆರಿ್ಡ.ಪಿ.ಆರ್ ಅಧಿಕಾರಿ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು.ಸಂತೋಷಕುಮಾರ್ ಪಾಟೀಲ್, ಸಹಾಯಕ ನಿರ್ದೇಶಕರು, ಗ್ರಾಮೀಣ ಉದ್ಯೋಗ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 