55.88 ಕೋಟಿ ಮೌಲ್ಯದ ಮಾದಕ ವಸ್ತು ವಶ ಬೆಂಗಳೂರಿನಲ್ಲಿ ಮಹಾಮಾದಕವಸ್ತು ನಿಗ್ರಹ ಕಾರ್ಯಪಡೆ ಕಾರ್ಯಾಚರಣೆ
Narcotics Control Task Force operation in Bengaluru, drugs worth Rs 55.88 crore seized
ಠಾಣೆ/ಬೆಂಗಳೂರು: ಹೊಸ ವರ್ಷಾಚರಣೆಗೆ ಭರ್ಜರಿ ತಯಾರಿ ನಡೆದಿರುವ ನಡುವೆಯೇ, ಬೆಂಗಳೂರು ಪೊಲೀಸರ ಸಹಕಾರದಲ್ಲಿ ರಾಜಧಾನಿಯಲ್ಲಿ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರದ ಮಾದಕವಸ್ತು ನಿಗ್ರಹ ಕಾರ್ಯಪಡೆ, ಭಾರಿ ಪ್ರಮಾಣದ ಡ್ರಗ್ಸ್ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದು, 55.88 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ.
ಮುಂಬೈನಲ್ಲಿ ಸೆರೆಸಿಕ್ಕ ಆರೋಪಿಯೊಬ್ಬ ಕೊಟ್ಟ ಸುಳಿವು ಆಧರಿಸಿ, ಮೈಸೂರಿನಲ್ಲಿ ದಾಳಿ ನಡೆಸಿದ್ದ ಮಹಾರಾಷ್ಟ್ರದ ಮಾದಕವಸ್ತು ನಿಗ್ರಹ ಕಾರ್ಯಪಡೆ (ಎಎನ್ಟಿಎಫ್) ₹250 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿತ್ತು. ಇದು ಇಡೀ ರಾಜ್ಯವನ್ನು ದಂಗು ಬಡಿಸಿತ್ತು. ಈಗ ಬೆಂಗಳೂರಿನಲ್ಲಿಯೂ ಮಾದಕವಸ್ತು ಜಾಲವನ್ನು ಎಎನ್ಟಿಎಫ್ ಭೇದಿಸಿದ್ದು, ರಾಜ್ಯದಾದ್ಯಂತ ಮಾದಕ ವಸ್ತು ತಯಾರಿ, ಮಾರಾಟದ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಂಶಯ ಮೂಡಿಸಿದೆ.
ಬೆಂಗಳೂರು ಪೊಲೀಸರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ ಎಎನ್ಟಿಎಫ್, ನಗರದಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ಮೆಫೆಡ್ರೋನ್ ತಯಾರಿಸುವ ಮೂರು ಕಾರ್ಖಾನೆಗಳನ್ನು ಧ್ವಂಸಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಶಂಕಿತರ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ.
ಬೆಂಗಳೂರು ಉತ್ತರ ಜಿಲ್ಲೆಯ ಬಾಗಲೂರಿನ ಸ್ಪಂದನಾ ಲೇಔಟ್ ಕಾಲೋನಿ, ಕೊತ್ತನೂರಿನ ಎನ್.ಜಿ.ಗೊಲ್ಲಹಳ್ಳಿ ಪ್ರದೇಶ ಹಾಗೂ ಅವಳಹಳ್ಳಿ ಠಾಣಾ ವ್ಯಾಪ್ತಿಯ ಯರಪ್ಪನಹಳ್ಳಿಯಲ್ಲಿ ದಾಳಿ ನಡೆಸಿ, 55.88 ಕೋಟಿ ಮೌಲ್ಯದ ಮಾದಕ ವಸ್ತು ತಯಾರಿಸುವ ಕಚ್ಛಾ ವಸ್ತುಗಳು, ರಾಸಾಯನಿಕ, ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿಸಿರುವುದಾಗಿ ಎನ್ಎಟಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ಡ್ರಗ್ಸ್ ಸಾಗಣೆ ಮತ್ತು ಮಾರಾಟ ವಿರುದ್ಧ ರಾಜ್ಯವ್ಯಾಪಿ ಕಾರ್ಯಾಚರಣೆ ಆರಂಭಿಸಿದ್ದ ಎಎನ್ಟಿಎಫ್, ಡಿಸೆಂಬರ್ 21ರಂದು ಆರೋಪಿ ಅಬ್ದುಲ್ ಖಾದರ್ ರಶೀದ್ ಅವರನ್ನು ಬಂಧಿಸಿ, ₹1.48 ಕೋಟಿ ಮೌಲ್ಯದ ಮೆಫೆಡ್ರೋನ್ ವಶಪಡಿಸಿಕೊಂಡಿತ್ತು. ಆತ ನೀಡಿದ ಮಾಹಿತಿ ಆಧರಿಸಿ ಬೆಳಗಾವಿ ನಿವಾಸಿ ಪ್ರಶಾಂತ ಯಲ್ಲಪ್ಪ ಪಾಟೀಲ ಅವರನಮ್ನ ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿತ್ತು. ಆತ ನೀಡಿದ ಮಾಹಿತಿ ಆಧರಿಸಿ, ಬೆಂಗಳೂರಿನಲ್ಲಿ ಡ್ರಗ್ಸ್ ತಯಾರಿಸುವ ಮೂರು ಕಾರ್ಖಾನೆಗಳ ಮೇಲೆ ದಾಳಿ ನಡೆಸಲಾಯಿತು ಎಂದೂ ಪ್ರಕಟಣೆ ಹೇಳಿದೆ.
ಡ್ರಗ್ಸ್ ತಯಾರಿಸುವ ಕಾರ್ಖಾನೆಗಳ ಬಗ್ಗೆ ಸ್ಥಳೀಯ ಗಸ್ತು ಪೊಲೀಸರ ಗಮನಕ್ಕೆ ಬಾರದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಾಗಲೂರು, ಕೊತ್ತನೂರು ಮತ್ತು ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಪ್ರದೇಶಗಳಲ್ಲಿ ಹಲವು ತಿಂಗಳಿನಿಂದ ಈ ಘಟಕಗಳು ಕಾರ್ಯನಿರ್ವಹಿಸುತ್ತಿರುವುದನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಆರೋಪಿಗಳು ಘಟಕ ಆರಂಭಿಸಲು ನಕಲಿ ದಾಖಲೆಗಳನ್ನು ನೀಡಿ ನೋಂದಾಯಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇದೇ ಕಾರಣಕ್ಕೆ ಪತ್ತೆ ಹಚ್ಚುವುದು ಕಷ್ಟವಾಗಿದೆ. ಈ ಬಗ್ಗೆ ಜಂಟಿ ತನಿಖೆ ನಡೆಸಲಾಗುವುದು ಎಂದು ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
‘ಎಎನ್ಟಿಎಫ್ನ
ತಂಡಗಳು ಕಾರ್ಯಾಚರಣೆ ನಡೆಸಿ, ಇತ್ತೀಚೆಗೆ ರಾಜಸ್ಥಾನ ನಿವಾಸಿಗಳಾದ ಸೂರಜ್ ರಮೇಶ್ ಯಾದವ್ ಹಾಗೂ ಮಲ್ಕನ್ ರಾಮಲಾಲ್ ಬಿಷ್ಣೋಯಿ ಅವರನ್ನು ಬಂಧಿಸಿದ್ದವು. ಇವರು ಬೆಂಗಳೂರಿನಲ್ಲಿ ಚಟುವಟಿಕೆ ನಡೆಸುತ್ತಿದ್ದುದು ತನಿಖೆಯಿಂದ ಗೊತ್ತಾಯಿತು’ ಎಂದು ಎಎನ್ಟಿಎಫ್ ತನ್ನ ಪ್ರಕಟಣೆಯಲ್ಲಿ ವಿವರಿಸಿದೆ.
‘ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಬೆಂಗಳೂರಿನಲ್ಲಿ ಮೂರು ತಯಾರಿಕಾ ಘಟಕಗಳು ಇರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಬಳಿಕ ಈ ಘಟಕಗಳ ಮೇಲೆ ದಾಳಿ ನಡೆಸಿ, ಘನ ಮತ್ತು ದ್ರವ ರೂಪದಲ್ಲಿದ್ದ ಒಟ್ಟು 21.4 ಕೆ.ಜಿ ಮೆಫೆಡ್ರೋನ್ ಜಪ್ತಿ ಮಾಡಲಾಗಿದೆ. ಈ ಡ್ರಗ್ಸ್ ತಯಾರಿಸಲು ಬಳಸುತ್ತಿದ್ದ ಯಂತ್ರೋಪಕರಣಗಳು ಹಾಗೂ ರಾಸಾಯನಿಕಗಳನ್ನು ಮುಟ್ಟುಗೋಲು ಹಾಕಿಕೊಂಡು, ಮೂರೂ ಕಾರ್ಖಾನೆಗಳನ್ನು ಧ್ವಂಸ ಮಾಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.
‘ಈ
ಕಾರ್ಖಾನೆಗಳಲ್ಲಿ ತಯಾರಿಸಲಾಗುತ್ತಿದ್ದ ಮೆಫೆಡ್ರೋನ್ ಅನ್ನು ಹಲವು ರಾಜ್ಯಗಳಿಗೆ ಪೂರೈಸಲಾಗುತ್ತಿತ್ತು. ಈ ಡ್ರಗ್ಸ್ ಮಾರಾಟದಿಂದ ಬಂದ ಹಣವನ್ನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ನಲ್ಲಿ ತೊಡಗಿಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 