ಮಾದಕ ದ್ರವ್ಯ ವಸ್ತುಗಳ ಅರಿವು ಜಾಗೃತಿ ಜಾಥಾ
Narcotics awareness rally
ಕಂಪ್ಲಿ: 01: ಪಟ್ಟಣದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಕೆ.ಬಿ.ವಾಸುಕುಮಾರ ಅವರ ನೇತೃತ್ವದಲ್ಲಿ ಮಂಗಳವಾರ ಮಾದಕ ದ್ರವ್ಯ ಉಪಯೋಗದಿಂದಾಗುವ ದುಷ್ಪರಿಣಾಮಗಳ ಅರಿವು ಜಾಗೃತಿ ಜಾಥಾ ನಡೆಸಿದರು.
ಇಲ್ಲಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ಕೈಯಲ್ಲಿ ಹಿಡಿದು ಘೋಷಣೆಗಳನ್ನು ಕೂಗುತ್ತಾ ದಾರಿಯುದ್ದಕ್ಕೂ ಸಾಗಿದರು.
ಇಲ್ಲಿನ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಿಂದ ಆರಂಭಗೊಂಡ ಜಾಗೃತಿ ಮೆರವಣಿಗೆ ಮಹಾತ್ಮಗಾಂಧಿ ವೃತ್ತ, ಡಾ.ಅಂಬೇಡ್ಕರ್ ವೃತ್ತ, ನಡುವಲ ಮಸೀದಿ ಸೇರಿದಂತೆ ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಪಿಐ ಕೆ.ಬಿ.ವಾಸುಕುಮಾರ ಜಾಗೃತಿ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ದೇಶದ ಆಸ್ತಿ. ಹೀಗಾಗಿ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ಮಾದಕ ದ್ರವ್ಯಗಳ ಮುಕ್ತ ಗ್ರಾಮಕ್ಕಾಗಿ ಎಲ್ಲರೂ ಪಣ ತೊಡಬೇಕು ಎಂದು ಹೇಳಿದರು.
ನಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಮಾದಕ ದ್ರವ್ಯಗಳನ್ನು ಬಳಸದಂತೆ ಪ್ರತಿಜ್ಞೆ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಬಿಎಸ್‌ಐ ಅವಿನಾಶ್ ಕಾಂಬ್ಳೆ, ಉಪ ಪ್ರಾಚಾರ್ಯ ಸುಜಾತ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ಶಾಲಾ-ಕಾಲೇಜು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 