ಮಾದಕ ವಸ್ತು ಮಾರಾಟ: ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು. ನ.11:        ವಿದ್ಯಾರ್ಥಿ ವೀಸಾದ ಮೇಲೆ ನಗರಕ್ಕೆ ಬಂದು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ನೈಜೀರಿಯ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ  ನೈಜೀರಿಯಾ ಪ್ರಜೆ ಮೀರಾಕಲ್ ಚುಕ್ಕು ಹುಕ್ಕಾ (39) ಬಂಧಿತ ಆರೋಪಿ. ಆತನಿಂದ 12 ಗ್ರಾಂ ಕೊಕೇನ್, 5 ಮೊಬೈಲ್ ಹಾಗೂ 10,200 ರೂ. ನಗದನ್ನು ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ.

ಆರೋಪಿಯು ವಿದ್ಯಾರ್ಥಿ ವೀಸಾ ಮೇಲೆ ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.  ಅಲ್ಲಿದ್ದುಕೊಂಡೇ ತಮ್ಮ ದೇಶದ ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯದ ಯುವಕರಿಗೆ ಕೊಕೇನ್ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಆರೋಪಿಯ ಪಾಸ್ ಪೋರ್ಟ್ ವೀಸ್ ವಶಕ್ಕೆ ಪಡೆದುಕೊಂಡು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.