ನವದೆಹಲಿ, ನ 30 -ದೇಶದ ಸಮಗ್ರ ಅಭಿವೃದ್ಧಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈಗಾಗಲೇ ಹಲವು ತೀರ್ಮಾನ ತೆಗೆದುಕೊಂಡಿದ್ದು, ಮುಂದೆಯೂ ಸಾಮಾಜಿಕ ಸಬಲೀಕರಣ ಮತ್ತು ದೇಶದ ಏಕತೆ ಹಾಗೂ ಸಮಗ್ರತೆ ಕಾಪಾಡುವ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ಅವರು ಪ್ರಕಟಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನವಭಾರತ ನಿರ್ಮಾಣಕ್ಕಾಗಿ ಸರ್ಕಾರ ಸಂಕಲ್ಪ ಮಾಡಿದ್ದು ಅದನ್ನು ಈಡೇರಿಸುವ ಪಣ ತೊಟ್ಟಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯ ಎಂದು ಅವರು ಮನವಿ ಮಾಡಿದ್ದಾರೆ.
ಸಿಕ್ಸ್ ಮಂತ್ಸ್ ಆಫ್ ಇಂಡಿಯಾ ಫಸ್ಟ್ ಹ್ಯಾಷ್ ಟ್ಯಾಗ್ ನಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಅವರು, ಎಲ್ಲರೊಂದಿಗೆ, ಎಲ್ಲರ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯವೇ ಸರ್ಕಾರದ ಆಡಳಿತ ಮಂತ್ರವಾಗಿದೆ.
130 ಕೋಟಿ ಜನರ ಆಶೀರ್ವಾದದೊಂದಿಗೆ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರ ಜನರ ಬದುಕನ್ನು ಹಸನಾಗಿಸಲು ಮುಂದೆಯೂ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.