ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ-2026
National Anti-Malaria Month Celebration-2026
ಲೋಕದರ್ಶನ ವರದಿ
ಧಾರವಾಡ 17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ಐ.ಇ.ಸಿ ವಿಭಾಗ ಹಾಗೂ ಸನಾ ಇನ್ಸಿ-್ಟಟ್ಯೂಷನ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಜೂ.17) ಹುಬ್ಬಳ್ಳಿಯ ಸನಾ ಇನ್ಸಿ-್ಟಟ್ಯೂಷನ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಅಭಿಯಾನವನ್ನು ಆಯೋಜಿಸಲಾಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಳೆಗಾಲದ ಆರಂಭದೊಂದಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹೇಳಿದರು. ಆರೋಗ್ಯಕರ ಸಮಾಜ ನಿರ್ಮಾಣವು ಆರೋಗ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕರ ಕರ್ತವ್ಯವೂ ಆಗಿದೆ. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಲೇರಿಯಾ ರಹಿತ ಜಿಲ್ಲೆಯನ್ನು ನಿರ್ಮಿಸುವುದು ಸಾಧ್ಯ ಎನ್ನುತ್ತಾ ಹೆಚ್ಚು ಪ್ರಾಣಾಪಾಯ ತರುವ ಸೊಳ್ಳೆಗಳಿಂದ ನಿಮ್ಮ ಕುಟುಂಬವನ್ನು ರಕ್ಷಿಸಿ, ಜಾಗೃತಿಯೇ ಮಲೇರಿಯಾ ತಡೆಗಟ್ಟಲು ಇರುವ ಏಕೈಕ ದಾರಿ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 