ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ-2026

ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ-2026 National Anti-Malaria Month Celebration-2026

ಲೋಕದರ್ಶನ ವರದಿ 

ಧಾರವಾಡ 17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ಐ.ಇ.ಸಿ ವಿಭಾಗ ಹಾಗೂ ಸನಾ ಇನ್ಸಿ-್ಟಟ್ಯೂಷನ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್‌ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಜೂ.17) ಹುಬ್ಬಳ್ಳಿಯ ಸನಾ ಇನ್ಸಿ-್ಟಟ್ಯೂಷನ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್‌ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಅಭಿಯಾನವನ್ನು ಆಯೋಜಿಸಲಾಗಿತು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್‌.ಕೆ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಳೆಗಾಲದ ಆರಂಭದೊಂದಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹೇಳಿದರು. ಆರೋಗ್ಯಕರ ಸಮಾಜ ನಿರ್ಮಾಣವು ಆರೋಗ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕರ ಕರ್ತವ್ಯವೂ ಆಗಿದೆ. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಲೇರಿಯಾ ರಹಿತ ಜಿಲ್ಲೆಯನ್ನು ನಿರ್ಮಿಸುವುದು ಸಾಧ್ಯ ಎನ್ನುತ್ತಾ ಹೆಚ್ಚು ಪ್ರಾಣಾಪಾಯ ತರುವ ಸೊಳ್ಳೆಗಳಿಂದ ನಿಮ್ಮ ಕುಟುಂಬವನ್ನು ರಕ್ಷಿಸಿ, ಜಾಗೃತಿಯೇ ಮಲೇರಿಯಾ ತಡೆಗಟ್ಟಲು ಇರುವ ಏಕೈಕ ದಾರಿ ಎಂದರು.