ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ
ನವದೆಹಲಿ 07: ಭಯೋತ್ಪಾದನೆಯನ್ನು ಮಟ್ಟಹಾಕುವ ಸಂಬಂಧ ಕೇಂದ್ರ ಸರ್ಕಾರ ‘ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ನೀತಿ’ ಹಾಗೂ ಕಾರ್ಯತಂತ್ರ ರೂಪಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
‘ದೇಶವು ಭಯೋತ್ಪಾದನೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ದೃಢವಾದ ಕಾರ್ಯತಂತ್ರದೊಂದಿಗೆ ಹೆಜ್ಜೆ ಹಾಕುತ್ತಿದೆ. ಎಲ್ಲ ರಾಜ್ಯಗಳ ಹಾಗೂ ಕೇಂದ್ರೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಸಂಸ್ಥೆಗಳು ಜಂಟಿ ತಂತ್ರಗಳನ್ನು ರೂಪಿಸುವ ಜೊತೆಗೆ ತಮ್ಮಲ್ಲಿನ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವುದು ಅಗತ್ಯ’ ಎಂದು ಶಾ ಹೇಳಿದರು.
ಎರಡು ದಿನಗಳ ಈ ಸಮಾವೇಶ ಶುಕ್ರವಾರ ಅಂತ್ಯಗೊಳ್ಳಲಿದೆ. ಭದ್ರತಾ ಪಡೆಗಳು, ತಂತ್ರಜ್ಞರು, ಕಾನೂನು ತಜ್ಞರು, ವಿಧಿವಿಜ್ಞಾನ ಪರಿಣತರು ಸೇರಿದಂತೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತೊಡಗಿರುವ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.