ರಾಷ್ಟ್ರೀಯ ವೈದ್ಯರ ದಿನ: ಆರೋಗ್ಯ ಶಿಬಿರ
National Doctor's Day: Health Camp
ವಿಜಯಪುರ 02: ಸಿಕ್ಯಾಬ್ ಲುಕ್ಮಾನ್ ಯುನಾನಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸಿಕ್ಯಾಬ್ ಆಂಗ್ಲ ಮಾಧ್ಯಮ ಕೆ ಜಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ನವರಸಪುರನಲ್ಲಿ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ವೈದ್ಯರ ದಿನದ ಸಂದರ್ಭದಲ್ಲಿ, ಸಿಕ್ಯಾಬ್ ಆಂಗ್ಲ ಮಾಧ್ಯಮ ಕೆ ಜಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ 5 ರಿಂದ 16 ವರ್ಷ ವಯಸ್ಸಿನ 600ಕ್ಕೂ ಹೆಚ್ಚು ಮಕ್ಕಳನ್ನು 24 ವೈದ್ಯರು ಮತ್ತು ಅರೆವೈದ್ಯರು ಪರೀಕ್ಷಿಸಿದರು. ಅವರು ಮಕ್ಕಳನ್ನು ಪರೀಕ್ಷಿಸಿ ಮೌಲ್ಯಮಾಪನ ವರದಿಯನ್ನು ನೀಡಿದರು.ಹೆಚ್ಚಿನ ಮೌಲ್ಯಮಾಪನಗಳು ಮತ್ತು ನಿರ್ದಿಷ್ಟ ಚಿಕಿತ್ಸೆಯ ಅಗತ್ಯವಿರುವ ಮಕ್ಕಳಿಗೆ ಅನುಸರಣೆಗಾಗಿ ಸೂಚಿಸಲಾಯಿತು. ಸಿಕ್ಯಾಬ್ ಆಂಗ್ಲ ಮಾಧ್ಯಮ ಶಾಲೆಯು ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಿದ್ದರು.
ಸಿಕ್ಯಾಬ್ ಲುಕ್ಮಾನ್ ಯುನಾನಿ ಮೆಡಿಕಲ್ ಕಾಲೇಜಿನ ಡಾ. ನಿಕಹತ ಇನಾಮದಾರ, ಡಾ. ಸಬಾ ಮಮದಾಪೂರ, ಡಾ. ಸುಮಯ್ಯಾ ಬೇಗಂ, ಸಿಕ್ಯಾಬ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಅನಿತಾ ನರೇಗಲ, ಪೂರ್ವ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಫಾತಿಮಾ ಜಮಾದಾರ ಹಾಗೂ ಶಾಲೆಯ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 