ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆರೋಗ್ಯ ಅರಿವು ಕಾರ್ಯಕ್ರಮ ಯಶಸ್ವಿ

ಕೊಪ್ಪಳ 26: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಪ್ರಮುಖ ಪ್ರೇರಣಾದಾರರಿಗೆ ಎನ್.ಸಿ.ಸಿ/ಎನ್.ಎಸ್.ಎಸ್ ವಿದ್ಯಾಥರ್ಿಗಳಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ/ಯೋಜನೆಗಳ ಸಾಂಕ್ರಾಮಿಕ/ಅಸಾಂಕ್ರಾಮಿಕ ರೋಗಗಳ ಕುರಿತು ಫೆ. 25ರಂದು ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾ ವಿದ್ಯಾಲಯದಲ್ಲಿ  ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ. ಪೂಜಾರ ಮಾತನಾಡಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಇಂದು ಹಲವಾರು ಯೋಜನೆ/ಕಾರ್ಯಕ್ರಮಗಳನ್ನು ಸಕರ್ಾರ ಜಾರಿಗೆ ತಂದಿದೆ. ಅದರಲ್ಲಿ ಮುಖ್ಯವಾಗಿ ತಾಯಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ, ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ, ಅನೀಮಿಯ ಮುಕ್ತ ಭಾರತ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ, ಪೌಷ್ಠಿಕ ಪುನಶ್ಚೇತನಾ ಕೇಂದ್ರ, ವಿಶೇಷ ನವಜಾತ ಶಿಶು ಆರೈಕೆ ಘಟಕ, `ಮಾ' ಕಾರ್ಯಕ್ರಮ, ನಗು ಮಗು ವಾಹನ, ಶುಚಿ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಶಾಲಾ ಮಕ್ಕಳಿಗೆ ಕಬ್ಬಿಣಾಂಶ ಮಾತ್ರೆ ವಿತರಣಾ ಕಾರ್ಯಕ್ರಮ, ರಾಷ್ಟ್ರೀಯ ಜಂತು ನಿವಾರಣೆ ದಿನ, ಆಶಾ ಯೋಜನೆ, ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಹಾಗೂ ನಿವಾರಣಾ ಕಾರ್ಯಕ್ರಮ, ಗಭರ್ಿಣಿಯರಿಗೆ ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಲಿಕ್ ಆಮ್ಲದ ಮಾತ್ರೆ ವಿತರಣಾ ಕಾರ್ಯಕ್ರಮ, ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಒಂದು ಮಗುವಿನಿಂದ ಇನ್ನೂಂದು ಮಗುವಿಗೆ ಕನಿಷ್ಠ 03 ವರ್ಷ ಅಂತರ ಕಾಪಾಡಲು ಹೊಸ ತಾತ್ಕಾಲಿಕ ವಿಧಾನಗಳಾದ ಪಿ.ಪಿ.ಐ.ಯು.ಸಿ.ಡಿ, 03 ತಿಂಗಳಿಗೊಮ್ಮೆ ಅಂತರ ಚುಚ್ಚುಮದ್ದು, ಛಾಯಾ ನುಂಗುವ ಮಾತ್ರೆ, ತುತರ್ು ಗರ್ಭ ನಿರೋಧಕಗಳು, ಪಿ.ಎ.ಐ.ಯು.ಸಿ.ಡಿ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

'ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಕಾರ್ಯಕ್ರಮ'ದಲ್ಲಿ ಗಂಭೀರ ಖಾಯಿಲೆಗಳಿಗೆ ಉನ್ನತ ಮಟ್ಟದಲ್ಲಿ ಉಚಿತ ಶಸ್ತ್ರ ಚಿಕಿತ್ಸೆಯನ್ನು ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ 05 ಲಕ್ಷ ಹಾಗೂ ಎ.ಪಿ.ಎಲ್ ಕುಟುಂಬದವರಿಗೆ 1.50 ಲಕ್ಷದವರೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಂಯುಕ್ತ ಆಶ್ರಯದಲ್ಲಿ ಸಹಾಯಧನ ನೀಡಲಾಗುತ್ತದೆ. ಸಾಂಕ್ರಾಮಿಕ ರೋಗಗಳಾದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಡೆಂಗ್ಯೂ, ಮಲೇರಿಯಾ, ಚಿಕನ್ಗುನ್ಯ, ಮೆದುಳು ಜ್ವರ, ಆನೆಕಾಲು ರೋಗ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಅಂಧತ್ವ ಕಾರ್ಯಕ್ರಮ, ರಾಷ್ಟ್ರೀಯ ಫ್ಲೋರೊಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತದೆ. ಜೀವನ ಶೈಲಿಯಿಂದ ಬರುವ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಖಾಯಿಲೆ, ಅಧಿಕ ತೂಕ-ಬೊಜ್ಜು, ಪಾಶ್ರ್ವವಾಯು ಇವುಗಳಿಂದ ದೂರವಿರಬೇಕು. ಪೌಷ್ಠಿಕ ಆಹಾರ ಸೇವನೆ ಮಾಡುವುದು, ದೈಹಿಕ ಶ್ರಮವಹಿಸಿ ಕೆಲಸ ನಿರ್ವಹಿಸುವುದರಿಂದ ರೋಗಗಳಿಂದ ದೂರವಿರಬಹುದು ಎಂದು ವಿದ್ಯಾಥರ್ಿಗಳಿಗೆ ಕರೆ ನೀಡಿದರು. 

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮನೋಹರ ದಾದ್ಮೀ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಳ್ಳುವ ಜಾಗೃತಿ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಅವಶ್ಯಕವಾದ ಕಾರ್ಯಕ್ರಮಗಳಾಗಿವೆ. ಕಾರ್ಯಕ್ರಮದಲ್ಲಿ ಎನ್.ಸಿ.ಸಿ  ಅಧಿಕಾರಿ ಡಾ. ದಯಾನಂದ ಸಾಳುಂಕಿ, ಕನ್ನಡ ಉಪನ್ಯಾಸಕರಾದ ಡಾ. ಬಸವರಾಜ ಪೂಜಾರ, ಎನ್.ಎಸ್.ಎಸ್ ಅಧಿಕಾರಿ ರಾಜು ಹೊಸಮನಿ, ಉಪನ್ಯಾಸಕರು, ಸಿಬ್ಬಂದಿ, ಎನ್.ಸಿ.ಸಿ/ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಎನ್.ಸಿ.ಸಿ/ಎನ್.ಎಸ್.ಎಸ್  ಘಟಕಗಳಿಗೆ ''ಅಭಿನಂದನಾ ಪ್ರಮಾಣ ಪತ್ರ' ನೀಡಲಾಯಿತು.