ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ National Legal Services Day and Legal Awareness-Assistance Program

                    ಧಾರವಾಡ ನ.14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಬಿ.ಆರ್‌.ಅಂಬೇಡ್ಕರ್  ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ರಾಷ್ಟ್ರೀಯ ದತ್ತು ಮಾಸಾಚರಣೆ - 2025 ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಬುದ್ದ ರಕ್ಷೀತ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿತ್ತು.  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ್ ಎಫ್ ದೊಡ್ಡಮನಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.  

                    1929 ಸಾಲಿನಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರು ಕಟ್ಟಿ ಬೆಳಿಸಿದ ಈ ಶಾಲೆಯಲ್ಲಿ ಮಕ್ಕಳಿಗೆ ಕಲಿಯುವ ಅವಕಾಶ ಸಿಕ್ಕಿದ್ದು ಪುಣ್ಯ. ಮಕ್ಕಳು ಈ ಪವಿತ್ರ ಭೂಮಿಯಲ್ಲಿ ಚೆನ್ನಾಗಿ ಓದಿ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಬೆಳೆಯಬೇಕು. ಇಂದಿನ ಮಕ್ಕಳು ಮುಂದಿನ ಪ್ರಜೆಗಳು. ಆ ಕಾರಣ ಸಂವಿಧಾನದ ಸಂಪೂರ್ಣ ಅರಿವು ಪ್ರತಿಯೊಬ್ಬ ಭಾರತೀಯ ಪ್ರಜೆಗೆ ಇರುವುದು ಅತೀ ಅವಶ್ಯಕ ಎಂದು ತಿಳಿಸಿದರು. ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಗುವಿನ ಹಕ್ಕು ಎಂದು ಹೇಳಿದರು.  ಪ್ಯಾನೆಲ್ ವಕೀಲರು ಪ್ರಭಾವತಿ ದೇಸಾಯಿ ಮತ್ತು ಅರೇ ಕಾನೂನು ಸ್ವಯಂ ಸೇವಕರು ಮಹ್ಮದಲಿ ತಹಶೀಲ್ದಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.  

                         ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ಆರ್‌.ಅಂಬೇಡ್ಕರ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ದ ಜಿ.ಎಚ್‌.ನಾಗಾವಿ ಅವರು ವಹಿಸಿದ್ದರು. ಅತಿಥಿಗಳಾಗಿ ಸರ್ಕಾರಿ ವಕೀಲರಾದ ಎಸ್‌.ಎನ್‌.ಚಿಕ್ಕಣ್ಣವರ್, ಪ್ರೊ. ಕೆ.ಜಿ. ಆಡೂರ್, ಸಂತೋಷ್ ಜಕಪ್ಪನವರ್, ಬಿ.ಕೆ.ಹಲಗಿ, ಸಿದ್ದಾರ್ಥ್‌ ಶಿವಶರಣ, ಸಹನಾ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಸಿಬ್ಬಂದಿ ವರ್ಗದವರು, ಮಕ್ಕಳು ಉಪಸ್ಥಿತರಿದ್ದರು.