ಆರ್. ಎಲ್. ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ಬೆಳಗಾವಿ 19: ವೈಕುಂಟಾ ಬಾಳಿಗ ಕಾನೂನು ಮಹಾವಿದ್ಯಾಲಯ ಉಡುಪಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಕೆಎಲ್‌ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿಗಳಾದ ಸಮಿಕ್ಷಾ ಮಹಾದಿಕ್, ಆಕಾಶ್ ಸರದೆಶಪಾಂಡೆ ಮತ್ತು ರೋಹನ್ ಲಾತೂರ ಅತ್ಯುತ್ತಮ ಮೆಮೋರಿಯಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ್, ಅಣಕು ನ್ಯಾಯಾಲಯ ಅಧ್ಯಕ್ಷ ಪ್ರೊ. ಅಶ್ವಿನಿ ಪರಬ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಬಹುಮಾನ ವಿಜೇತರನ್ನು ಅಭಿನಂದಿಸಿದ್ದಾರೆ.