ಲೋಕದರ್ಶನ ವರದಿ
ರಾಮದುರ್ಗ, 2: ತಾಲೂಕಿನ ಅವರಾದಿ ಶ್ರೀ ಫಲಹಾರೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕ ಆನಂದ ಹಕ್ಕೆನ್ನವರ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ "ರಾಜ್ಯೋತ್ಸವ ಸಿರಿಗನ್ನಡ ರಾಷ್ಟ್ರೀಯ ಸಾಹಿತ್ಯ ರತ್ನ" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಮಾಜ ಕಲ್ಯಾಣ ಸಂಸ್ಥೆ, ಕನರ್ಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ನಡೆದ ಸಾಹಿತ್ಯ, ಸಂಸ್ಕೃತಿ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದದಲ್ಲಿ ವಿಶಿಷ್ಠ ಸಾಧನೆ ಮಾಡಿದವರಿಗೆ ನೀಡಲಾಗುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಫಲಕ ಹಾಗೂ ನಗದು ನೀಡಿ ಗೌರವಿಸಲಾಗಿದೆ