ರಾಷ್ಟ್ರೀಯ ಲೋಕ ಅದಾಲತ್‌ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿನ ವ್ಯಾಜ್ಯ ಪೂರ್ವ 38,529 ಪ್ರಕರಣಗಳು ಹಾಗೂ 4,567 ಪ್ರಕರಣಗಳು ಇತ್ಯರ್ಥ

ರಾಷ್ಟ್ರೀಯ ಲೋಕ ಅದಾಲತ್‌ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿನ ವ್ಯಾಜ್ಯ ಪೂರ್ವ 38,529 ಪ್ರಕರಣಗಳು ಹಾಗೂ 4,567 ಪ್ರಕರಣಗಳು ಇತ್ಯರ್ಥ National Lok Adalat: 38,529 pre-litigation cases and 4,567 cases disposed of in all courts of the di

ಧಾರವಾಡ (ಮಾ.16): ಮಾರ್ಚ 14, 2026 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 55,410 ಪ್ರಕರಣಗಳಲ್ಲಿ 4,567 ಪ್ರಕರಣಗಳನ್ನು ಹಾಗೂ 41,156 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 38,529 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ ರೂ. 86,07,705 ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಪ್ರಕರಣಗಳಲ್ಲಿ ಒಟ್ಟು ರೂ. 48,16,98,630 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.  

ಧಾರವಾಡ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದ್ದ ವೈವಾಹಿಕ, ಜೀವನಾಂಶ ಪ್ರಕರಣಗಳಲ್ಲಿ ನಡೆದ ರಾಜೀ ಸಂಧಾನದ ಪರವಾಗಿ 15 ಪ್ರಕರಣಗಳು ಯಶಸ್ವಿಯಾಗಿ ದಂಪತಿಗಳು ಒಂದಾಗಿದ್ದಾರೆ. 73 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ರಾಜೀ ಪ್ರಕರಣದ ಮೂಲಕ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ.  ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್‌.ಭಾರತಿ ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಧೀಶರಿಗೆ, ನ್ಯಾಯವಾದಿಗಳಿಗೆ, ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆ, ವಿಮಾ ಕಂಪನಿಗಳು ಅವುಗಳ ನ್ಯಾಯವಾದಿಗಳಿಗೆ, ಅಭಿಯೋಜನೆಯ ಅಧಿಕಾರಿಗಳಿಗೆ, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ಕಕ್ಷಿದಾರರಿಗೆ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರವಾಗಿ ಶುಭಾಶಯಗಳನ್ನು ಕೋರಲಾಗಿದೆ.