ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್
National Lok Adalat held at Karnataka High Court, Dharwad Bench
ಲೋಕದರ್ಶನ ವರದಿ
ಧಾರವಾಡ 13 : ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಜುಲೈ 11, 2026 ರಂದು ದ್ವಿತೀಯ “ರಾಷ್ಟ್ರೀಯ ಲೋಕ ಅದಾಲತ್‌ನ್ನು” ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ ಅವರ ನೇತೃತ್ವದಲ್ಲಿ ಏರಿ್ಡಸಲಾಗಿತ್ತು.
ಅದಾಲತ್‌ನಲ್ಲಿ ನ್ಯಾಯಮೂರ್ತಿಗಳಾದ ಸಚಿನ ಶಂಕರ ಮಗದುಮ್, ಸಿ.ಎಮ್. ಪೂನಚ್ಚ ಮತ್ತು ಗೀತಾ ಕೆ. ಬಿ. ಹಾಗೂ ಅವರೊಂದಿಗೆ ಲೋಕ ಅದಾಲತ್‌ನ ಸದಸ್ಯರುಗಳಾದ ಕೆ.ಎಲ್. ಪಾಟೀಲ, ಸಾಜಿದ ಗೂಡವಾಲಾ, ಎಮ್.ಎಸ್. ಹಳ್ಳಿಕೇರಿ ಮತ್ತು ವಿದ್ಯಾವತಿ ಕೊಟ್ಟೂರಶೆಟ್ಟರ ವಕೀಲರುಗಳು ಒಟ್ಟು 4 ಪೀಠಗಳನ್ನು ಆಯೋಜಿಸಲಾಗಿತ್ತು. ಸದರಿ ಅದಾಲತ್‌ನಲ್ಲಿ ಒಟ್ಟು 1037 ಪ್ರಕರಣಗಳನ್ನು ಕೈಗೈತ್ತಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 366 ಪ್ರಕರಣಗಳನ್ನು ರೂ.16,62,34,920 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ಲೋಕ ಅದಾಲತ್‌ನಲ್ಲಿ ಅಪಘಾತ ಪರಿಹಾರ ಪ್ರಕರಣಗಳ ಜೊತೆಗೆ - ಭೂಸ್ವಾಧೀನ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಭೂಮಾಲಿಕರು ಹಾಗೂ ಸರಕಾರವು ಸಲ್ಲಿಸಿದ್ದ ಒಟ್ಟು 46 ಮೇಲ್ಮನವಿಗಳನ್ನು ಕರ್ನಾಟಕ ಸರಕಾರದ ಆದೇಶ.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 