ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್
ಬಳ್ಳಾರಿ,ಜು.11: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಜುಲೈ 12 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 