ಸೆ.19ರಂದು ಸವಣೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಸೆ.19ರಂದು ಸವಣೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್  National Lok Adalat to be held in Savanur on September 19

ಲೋಕದರ್ಶನ ವರದಿ 

ಸವಣೂರು, ಆ.29: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಾವೇರಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ಸವಣೂರು ವತಿಯಿಂದ ಸೆಪ್ಟೆಂಬರ್ 19ರಂದು ಸವಣೂರು ತಾಲೂಕು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.  

ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  

ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯದಲ್ಲಿ ಯಾವುದೇ ರೀತಿಯ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್ನಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ರಾಜಿ ಅಥವಾ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಶ್ರೀನಿವಾಸ್ ಎಸ್‌.ಎನ್‌. ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.