ರಾಷ್ಟ್ರೀಯ ಲೋಕ ಅದಾಲತ ಕಡಿಮೆ ಖರ್ಚಿನಲ್ಲಿ ಶೀಘ್ರ ವಿಲೇವಾರಿಗಾಗಿ ಸುವರ್ಣವಕಾಶ

ಗದಗ  22: ರಾಷ್ಟ್ರೀಯ ಲೋಕ ಅದಾಲತ ಮೂಲಕ ವಿವಿಧ ಪ್ರಕರಣಗಳ ಇತ್ಯರ್ಥ ಹಾಗೂ ಕಡಿಮೆ ಖಚರ್ಿನಲ್ಲಿ ಶೀಘ್ರ ವಿಲೇವಾರಿಗಾಗಿ ಸುವರ್ಣಾವಕಾಶವಾಗಿದೆ ಎಂದು ಗದಗ  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್. ಸಂಗ್ರೇಶಿ  ಅವರು ತಿಳಿಸಿದರು.

ಗದಗ ಜಿಲ್ಲಾ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ ಕುರಿತು ಜರುಗಿದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಲೋಕ ಅದಾಲತ ಮೂಲಕ ಪಕ್ಷಗಾರರು ತಮ್ಮ ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದ್ದು  ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸಂಧಾನಕಾರರಿಂದ ಮಾರ್ಗದರ್ಶನ ನೀಡಲಾಗುವದು ಎಂದರು. ಸೌಹಾರ್ದಯುತವಾಗಿ ಪ್ರಕರಣವು ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯವು ಉಳಿದು ವಿವಾದವು ಇತ್ಯರ್ಥಗೊಳ್ಳುತ್ತದೆ. ನ್ಯಾಯಾಲಯಕ್ಕೆ ದಾಖಲಾಗದೇ ಇರುವ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತನಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ  ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಈ ಕುರಿತು  ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಣ, ಲಕ್ಷ್ಮೇಶ್ವರ, ನರಗುಂದ, ಮುಂಡರಗಿ, ನ್ಯಾಯಾಲಯಗಳಲ್ಲಿರುವ ತಾಲೂಕಾ ಕಾನೂನು ಸೇವಾ ಸಮಿತಿಯನ್ನು ಸಂಪಕರ್ಿಸಿ ರಾಜೀ ಮೂಲಕ  ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. 2019 ರ ಡಿಸೆಂಬರ್ ವರೆಗೆ 3281 ಪ್ರಕರಣಗಳು ಇತ್ಯರ್ಥಗೊಂಡಿವೆ.  ಆ ಪೈಕಿ 1,143 ಪ್ರಕರಣಗಳು  ರಾಜೀ ಸಂಧಾನ ಮೂಲಕ, 623 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿದ್ದು  ಪ್ರಕರಣಗಳ ಇತ್ಯರ್ಥದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿದೆ ಎಂದರು.

  ಗದಗ ಜಿಲ್ಲೆಯ ರೋಣ, ಲಕ್ಷ್ಮೇಶ್ವರ, ಮುಂಡರಗಿ ನರಗುಂದ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳೆಂದು ಪರಿಗಣಿಸಿದ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ವಸೂಲಾತಿ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳೂ, ಚೆಕ್ ಬೌನ್ಸ್ ಪ್ರಕರಣಗಳು, ಕಾನೂನು ಪ್ರಕಾರ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಲು 2020 ನೇ ಸಾಲಿನಲ್ಲಿ ಫೆಬ್ರುವರಿ 8, ಎಪ್ರಿಲ್ 11, ಜುಲೈ 11, ಸೆಪ್ಟೆಂಬರ್ 12 ಮತ್ತು ಡಿಸೆಂಬರ್ 12 ರಂದು ಬರುವ ಎರಡನೇ ಶನಿವಾರಗಳಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗುತ್ತಿದೆ ಎಂದು ಗದಗ  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ  ಜಿ.ಎಸ್. ಸಂಗ್ರೇಶಿ  ಅವರು ತಿಳಿಸಿದರು.

ಅಪರ ಜಿಲ್ಲಾ ನ್ಯಾಯಾಧೀಶರಾದ ನರಸಿಂಹ ಎಂ.ವಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ರೂಪಾ ಎಸ್ ನಾಯಕ್,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್.ಜಿ. ಸಲಗರೆ,  1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಧೀಶ ಪಿ.ಜಿ. ಚೆಲುವಮೂತರ್ಿ,   ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ  ಶ್ರೀನಿವಾಸ್ , ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ  ರಾಜಣ್ಣ ಸಂಕಣ್ಣವರ,  ಕಿರಿಯ ವಿಭಾಗದ ನ್ಯಾಯಾಧೀಶರುಗಳಾದ ಎ.ಎಂ. ಬಡಿಗೇರ,  ಮಹಾದೇವಪ್ಪ ಎಚ್. ಶ್ರೀಕಾಂತ ರವೀಂದ್ರ,  ಸಲ್ಮಾ ಎ.ಎಸ್.  ಎಸ್. ಅಕ್ಕಿ , ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ  ವೈ.ಡಿ. ತಳವಾರ ಉಪಸ್ಥಿತರಿದ್ದರು.