ಹಿರೇಬೆವನೂರನಲ್ಲಿ ರಾಷ್ಟ್ರೀಯ ಪೋಷಣಾ ಮಾಸಾಚರಣೆ
National Nutrition Month Celebration in Hirebevanur
ಲೋಕದರ್ಶನ ವರದಿ
ಇಂಡಿ 23 : ತಾಲೂಕಿನ ಹಿರೇಬೆವನೂರ ಗ್ರಾಮದಲ್ಲಿ ರಾಷ್ಟ್ರೀಯ ಪೋಷಣಾ ಮಾಸಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಇಂಡಿ ಶಿಶು ಅಭಿವೃದ್ಧಿ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಜಿಗಳೂರ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮಾತನಾಡಿದ ಅವರು, ಆರೋಗ್ಯಕರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಸಮತೋಲಿತ ಪೌಷ್ಟಿಕ ಆಹಾರ ಪ್ರಮುಖ ತಳಹದಿಯಾಗಿದೆ. ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಪೋಷಕಾಂಶಗಳ ಕೊರತೆ ನಿವಾರಿಸುವ ಉದ್ದೇಶದಿಂದ ಪ್ರತಿ ವರ್ಷ ಸೆಪ್ಟೆಂಬರ್ 1ರಿಂದ 30ರವರೆಗೆ ರಾಷ್ಟ್ರೀಯ ಪೋಷಣಾ ಮಾಸಾಚರಣೆ ಆಚರಿಸಲಾಗುತ್ತದೆ ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೇತೃತ್ವದಲ್ಲಿ ‘ಪೋಷಣ್ ಅಭಿಯಾನ’ದಡಿ ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು, ಬೆಳೆಯುವ ಮಕ್ಕಳು ಹಾಗೂ ಹದಿಹರೆಯದ ಹೆಣ್ಣುಮಕ್ಕಳಲ್ಲಿ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
‘ಸಹಿ ಪೋಷಣ್, ದೇಶ್ ರೋಷನ್’ ಎಂಬ ಆಶಯದೊಂದಿಗೆ ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ, ಎಸಿಡಿಪಿಒ ಪಿ. ರೇಷ್ಮಾ ಚವ್ಹಾಣ, ವಲಯ ಮೇಲ್ವಿಚಾರಕರಾದ ಸಾವಿತ್ರಿ ವಾಲಿಕಾರ, ಕವಿತಾ ಪಾಟೀಲ, ಸಾವಿತ್ರಿ ಮಣ್ಣೂರ, ಪಿ.ಎಂ. ಭಜಂತ್ರಿ, ಲಲಿತಾ ಮಾದರ ಸೇರಿದಂತೆ ಮಲ್ಲಿಕಾರ್ಜುನ ದೇವಾಲಯದ ಅರ್ಚಕ ಈರಸಂಗಯ್ಯ ಮಠಪತಿ, ನಾಗಪ್ಪಗೌಡ ಬಿರಾದಾರ, ಅಣ್ಣಾರಾಯ ಬೊಮ್ಮನಹಳ್ಳಿ, ಖೋಬ್ಬನಗೌಡ, ಆರೋಗ್ಯ ಇಲಾಖೆಯ ಎಸ್.ಬಿ. ಗೋಟ್ಯಾಳ, ಸುನಂದಾ ಅಂಬಲಿಗಿ ಹಾಗೂ ಗ್ರಾಮ ಆಡಳಿತ ಅಧಿಕಾರಿ ಮಹೇಶ್ ರಾಠೋಡ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 