ಉತ್ತರ ಕನ್ನಡ ಜಿ.ಪಂ.ನಲ್ಲಿ ರಾಷ್ಟ್ರೀಯ ಪಂಚಾಯತ ರಾಜ್ ದಿನ ಆಚರಣೆ
National Panchayat Raj Day celebration in Uttara Kannada G.P
ಲೋಕದರ್ಶನ ವರದಿ
ಕಾರವಾರ 24 :- ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಂಚಾಯತ ರಾಜ್ ದಿನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಷ್ ಶಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ , ತೆರಿಗೆ ವಸೂಲಾತಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಿದ ತಾಲೂಕ ಪಂಚಾಯತ, ಪ್ರಸ್ತುತ ಬೇಡಿಕೆ ತೆರಿಗೆ ವಸೂಲಾತಿಯಲ್ಲಿ ಅತೀ ಹೆಚ್ಚು ಪ್ರಗತಿ ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಪಿಡಿಓ ಹಾಗೂ ಬಿಲ್ ಕಲೆಕ್ಟರ್ ಗೆ ಸನ್ಮಾನ, ಒಟ್ಟೂ ಬೇಡಿಕೆ ತೆರಿಗೆ ವಸೂಲಾತಿಯಲ್ಲಿ ಅತೀ ಹೆಚ್ಚು ಪ್ರಗತಿ ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕಾರ್ಯನಿರ್ವಾಹಕ ಅಧಿಕಾರಿ. ಪಿಡಿಓ ಹಾಗೂ ಬಿಲ್ ಕಲೆಕ್ಟರ್ ಗೆ ಸನ್ಮಾಗೆ,
ಮಹಿಳಾ ಸ್ನೇಹಿ ಉಪಕ್ರಮವನ್ನು ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ ಎನ್.ಆರ್.ಎಲ್.ಎಂ ಸ್ವ ಸಹಾಯ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿ, ಪಿಡಿಓಗೆ ಸನ್ಮಾನ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ನೀಡಿದ ಸರ್ಕಾರೇತರ ಸಂಸ್ಥೆಗಳು/ನಾಗರಿಕಾ ಸೇವಾ ಸಂಘಗಳಿಗೆ ಪುರಸ್ಕಾರ, ಉತ್ತಮ ದಾಖಲೆ ನಿರ್ವಹಿಸಿದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲಾ ಶಾಖಾ ಮುಖ್ಯಸ್ಥರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 