ಬಳ್ಳಾರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
National Pulse Polio Campaign launched in Bellary
ಬಳ್ಳಾರಿ 28: ದೇಶವನ್ನು ಪೋಲಿಯೋ ಮುಕ್ತವಾಗಿಡಲು ಹಾಗೂ ಮಕ್ಕಳ ರೋಗನಿರೋಧಕ ಶಕ್ತಿ ಹೆಚ್ಚಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಕರೆ ನೀಡಿದರು. ಭಾನುವಾರ ಜಿಲ್ಲಾಸ್ಪತ್ರೆಯ ಎಂಸಿಎಚ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ಅಭಿಯಾನದಲ್ಲಿ 0 ರಿಂದ 5 ವರ್ಷದೊಳಗಿನ 1,99,703 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಮೊದಲ ದಿನ ಬೂತ್ಗಳಲ್ಲಿ ಹಾಗೂ ಮುಂದಿನ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 