ಬಳ್ಳಾರಿಯಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಚಾಲನೆ

ಬಳ್ಳಾರಿಯಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಚಾಲನೆ National Pulse Polio Campaign launched in Bellary

 ಬಳ್ಳಾರಿ  28: ದೇಶವನ್ನು ಪೋಲಿಯೋ ಮುಕ್ತವಾಗಿಡಲು ಹಾಗೂ ಮಕ್ಕಳ ರೋಗನಿರೋಧಕ ಶಕ್ತಿ ಹೆಚ್ಚಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಕರೆ ನೀಡಿದರು. ಭಾನುವಾರ ಜಿಲ್ಲಾಸ್ಪತ್ರೆಯ ಎಂಸಿಎಚ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಜಿಲ್ಲೆಯಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ಅಭಿಯಾನದಲ್ಲಿ 0 ರಿಂದ 5 ವರ್ಷದೊಳಗಿನ 1,99,703 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಮೊದಲ ದಿನ ಬೂತ್‌ಗಳಲ್ಲಿ ಹಾಗೂ ಮುಂದಿನ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.