ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಹಿರೇಮುಗದೂರದಲ್ಲಿ ಚಾಲನೆ
National Pulse Polio Campaign launched in Hiremugadur
ಸವಣೂರ 28 ; ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಿಂಗಪ್ಪ ಎಂ. ಆರೇರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳ ಸಮರ್ಕ ಅನುಷ್ಠಾನ ಅಗತ್ಯವಾಗಿದೆ. ಭಾರತವನ್ನು ಪೋಲಿಯೊ ಮುಕ್ತವಾಗಿಸಲು ನಡೆಯುತ್ತಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಸಾರ್ವಜನಿಕರು ಸಹ ಸಕ್ರಿಯವಾಗಿ ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪರಮಯ್ಯ ಶಾಸ್ತ್ರಿ ಹಿರೇಮಠ ಮಾತನಾಡಿ, "ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಶ್ರೇಷ್ಠ" ಎಂದು ಹೇಳಿದರು. ಆಯುಷ್ಮಾನ್ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶಶಿಕಲಾ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಮಹತ್ವವನ್ನು ವಿವರಿಸಿ, ಅಭಿಯಾನ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಕೋರಿದರು. ಕಾರ್ಯಕ್ರಮದಲ್ಲಿ ಶಿವಪ್ಪ ಅರಳಿ, ಮಂಜುನಾಥ ಮರಾಠೆ, ಅಂಗನವಾಡಿ ಶಿಕ್ಷಕಿಯರಾದ ವನಿತಾ ಪಾಟೀಲ, ನೀಲಮ್ಮ ಹರಿಮುರಿ, ಲಕ್ಷ್ಮೀ ನಡುವಿನಮನಿ, ಆಶಾ ಕಾರ್ಯಕರ್ತೆ ರೇಣುಕಾ ಪವಾರ, ಗ್ರಾಪಂ ಸಿಪಾಯಿ ಗುಡ್ಡಪ್ಪ ಆರೇರ, ಸಿಬ್ಬಂದಿ, ಮಹಿಳೆಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 