ಬಸವರಾಜ ಮರದೂರಗೆ ರಾಷ್ಟ್ರೀಯ ರತ್ನ ರಾಷ್ಟ್ರ ಪ್ರಶಸ್ತಿ

ಲೋಕದರ್ಶನ ವರದಿ

ಕೊಪ್ಪಳ 03: ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ ಸುರ್ವೆ  ಕಲ್ಚರಲ್ ಅಕಾಡೆಮಿ ಬೆಂಗಳೂರು ಹಾಗೂ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಬೆಂಗಳೂರು ಅಪರ್ಿಸುವ ಡಾ. ವಿ.ಕೃ. ಗೋಕಾಕ ರಾಷ್ಟ್ರೀಯ ಕಲಾ ಪ್ರತಿಭೋತ್ಸವಭಾರತ ವಿಕಾಸರತ್ನ ರಾಷ್ಟ್ರ ಪ್ರಶಸ್ತಿ ಹಾಗೂ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಮರದೂರ ರಾಷ್ಟ್ರೀಯ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಲವಾರು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಹಾಗೂ ಬರವಣಿಗೆಯ ಮೂಲಕ ಚಿಕ್ಕ ವಯಸ್ಸಿನಲ್ಲೇ ಪತ್ರಿಕಾ ಸಂಪಾದಕನಾಗಿ, ಸುಧಾ ಕಲ್ಚರಲ್ ಅಕಾಡೆಮಿ ಸಂಸ್ಥೆ ಯಿಂದ ಹಸಿದವರಿಗೆ ಅನ್ನ ನೀಡುವುದು, ಸಾಮಾಜಿಕ ಜಾಲತಾಣದ ಮೂಲಕ ಕಾಣೆಯಾದ ಮಕ್ಕಳ ಹುಡುಕಾಟ, ಸಿನೆಮಾ, 21 ಬಾರಿ ರಕ್ತದಾನ ಹೀಗೆ ಹತ್ತಾರು ವಿವಿಧ ಮುಖಗಳಿಂದ ಗುರುತಿಸಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಷ್ಟ್ರೀಯ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಮಹತ್ವದ ರಾಷ್ಟ್ರೀಯ ರತ್ನ ಪ್ರಶಸ್ತಿ ಲಭಿಸಿರುವುದಕ್ಕೆ ಅವರ ಅಭಿಮಾನಿ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.