ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ : ಯಶಸ್ವಿಗೊಳಿಸಲು ನಾಯಾಧೀಶೆ ತೇಜಸ್ವಿನಿ ಕರೆ
National Road Safety Month Celebration: Chief Minister Tejaswini calls for a successful event
ದಾಂಡೇಲಿ .ಜ. 24 : ಸಾರ್ವಜನಿಕರು ರಸ್ತೆ ನಿಯಮವನ್ನು ಪಾಲಿಸುವುದರ ಮೂಲಕ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ದಾಂಡೇಲಿ ಜೆ.ಎಮ್.ಎಫ್.ಸಿ ನ್ಯಾಯಾಲಯದ ನಾಯಾಧೀಶೆ ತೇಜಸ್ವಿನಿ ಸೊಗಲದ ಕರೆ ನೀಡಿದರು. ದಾಂಡೇಲಿ ನ್ಯಾಯಾಲಯದ ಎದುರು ಶನಿವಾರ 37 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ವಾಹನ ಸವಾರರು ಹೆಲ್ಮೇಟ ಧರಿಸುವ ಮೂಲಕ ಸುಗಮ ಸಂಚಾರಕ್ಕೆ ಆದ್ಯತೆ ನೀಡಬೇಕು. ವಾಹನ ಚಾಲಕರು ವಾಹನ ಚಲಾಯಿಸುವಾಗ ಪಾದಚಾರಿಗಳ ಹಿತವನ್ನು ಗಮನದಲ್ಲಿಡಬೇಕು ಎಂದರು.
ದಾಂಡೇಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಮ್ ದಬಗಾರ ಮಾತನಾಡಿ ರಸ್ತೆ ಸುರಕ್ಷತಾ ಮಾಸಾಚರಣೆಯಿಂದ ಜನರಲ್ಲಿ ಜಾಗೃತಿ ಮೂಡುತ್ತದೆ. ಸಾರಿಗೆ ಇಲಾಖೆ ಮಾಡಿದ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವಿನಾಶ ಕೆ. ವಹಿಸಿದ್ದರು. ದಾಂಡೇಲಿ ನ್ಯಾಯಾಲಯದಿಂದ ಹೊರಟು ನಗರದ ಮುಖ್ಯರಸ್ತೆಯ ಮೂಲಕ ಸಾಗಿ ಪುನ: ನ್ಯಾಯಾಲಯದ ಆವರಣಕ್ಕೆ ತಲುಪಿತು ದಾರಿಯುದ್ದಕ್ಕೂ ರಸ್ತೆ ಸುರಕ್ಷತೆ ಘೊಷಣೆಗಳನ್ನು ಕೂಗಲಾಯಿತು. ಕಾರ್ಯಕ್ರಮದಲ್ಲಿ ದಾಂಡೇಲಿ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯರು ಮತ್ತು ಪಾದಾಧಿಕಾರಿಗಳು, ನ್ಯಾಯಾವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಸಾರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 37 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಸಂಘಟಿಸಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 