ಜನವರಿ 1 ರಿಂದ 31 ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆರಸ್ತೆ ಸುರಕ್ಷತೆ ನಿಯಮ ಪಾಲನೆ ಅತ್ಯಗತ್ಯ: ಶಶಿಧರ್ ಶೆಟ್ಟಿ
National Road Safety Month January 1-31 Obeying road safety rules is essential: Shashidhar Shetty
ಗದಗ 31: ರಸ್ತೆ ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವುದು ಅಥವಾ ಅಪಘಾತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶಶಿಧರ ಶೆಟ್ಟಿ ಅವರು ತಿಳಿಸಿದರು.ಅವರು ಡಿ. 31ರ ಬುಧವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.2026ರ ಜನವರಿ 01 ರಿಂದ 31 ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸಾರಿಗೆ ಇಲಾಖೆ, ಪೋಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಸ್ಥಳೀಯ ವಕೀಲರ ಸಂಘ, ವಿಮಾ ಕಂಪನಿಗಳ ಪ್ರತಿನಿಧಿಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಕುರಿತು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕೆಂದು ಸಲಹೆ ನೀಡಿದರು.
ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ, ಸುಪ್ರೀಂ ಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ಯೋಜನೆ ಜಾರಿ ಹಾಗೂ ಅನುಷ್ಠಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ವಾಹನ ಅಪಘಾತವಾದ ಸಂದರ್ಭಗಳಲ್ಲಿ ನಗದು ರಹಿತ ಚಿಕಿತ್ಸೆ, ವಿಮಾ ಮೊತ್ತ ಪಾವತಿಗೆ ಸಂಬಂಧಿಸಿದಂತೆ ನಮೂನೆಗಳ ಭರ್ತಿ ಇನ್ನಿತರೆ ಅಂಶಗಳ ಕುರಿತು ತರಬೇತಿ, ಕಾರ್ಯಾಗಾರ, ಸೆಮಿನಾರ್, ಪ್ಯಾನಲ್ ಚರ್ಚೆ, ಇನ್ನಿತರ ಕಾರ್ಯಕ್ರಮಗಳ ಮೂಲಕ ಅರಿವು ಮತ್ತು ಮಾಸ್ಟರ್ ಟ್ರೈನರ್ ಗಳಿಗೆ ಉನ್ನತ ಮಟ್ಟದ ತರಬೇತಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳಾದ ಸಾರಿಗೆ, ಪೋಲಿಸ್, ಸಿಬ್ಬಂದಿಯವರಿಗೆ ನೀಡಲಾಗುತ್ತದೆ ಎಂದರು.ಬಿ.ಎಂ.ಟಿ.ಸಿ, ಕೆ.ಎಸ್.ಆರಿ್ಟ.ಸಿ ಹಾಗೂ ಖಾಸಗಿ ಬಸ್‌ಗಳ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಬಸ್ ಚಾಲನೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಪರಿಣಾಮಕಾರಿಯಾದ ರಸ್ತೆ ಸುರಕ್ಷತೆ ಮಾಸಾಚರಣೆ ಅವಧಿಯಲ್ಲಿ ಹೆಚ್ಚಿನ ಹಾಗೂ ಪರಿಣಾಮಕಾರಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು.
ವಾಕಥಾನ್, ಮ್ಯಾರಾಥಾನ್, ವಿಂಟೇಜ್ ಕಾರ್ ರ್ಯಾಲಿ, ಸೈಕಲ್ ಜಾಥಾ, ಮಾನವ ಸರಪಳಿ ನಿರ್ಮಾಣದ ಮೂಲಕ ಜಾಗೃತಿ, ಸಂಚಾರ ಲೈವ್ ಪ್ರಾತ್ಯಕ್ಷಿಕೆ, ಪ್ಯಾನಲ್ ಚರ್ಚೆ, ಕಾರ್ಯಗಾರ, ವಾಣಿಜ್ಯ ವಾಹನ ಮಾಲೀಕರು, ವಾಹನ ಚಾಲಕರ ವಿವಿಧ ಸಂಘಟನೆಗಳ ಸದಸ್ಯರಿಗೆ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತ ದಾನ ಶಿಬಿರ, ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ ರಚನೆ, ಕಿರು ನಾಟಕ, ಚಿತ್ರಕಲಾ ಸ್ಪರ್ಧೆ, ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಸುರಕ್ಷತೆಯ ಸ್ಲೋಗನ್ ಪ್ರದರ್ಶನ, ಪತ್ರಿಕಾ ಮಾಧ್ಯಮ ಮತ್ತು ಎಲೆಕಾೊನಿಕ್ ಮಾಧ್ಯಮಗಳಲ್ಲಿ ಪ್ರಚಾರ, ರೇಡಿಯೋ ಜಿಂಗಲ್ಸ್ ಮತ್ತು ಸಿನಿಮಾ ಮಂದಿರಗಳಲ್ಲಿ ಜಾಹೀರಾತು ಪ್ರದರ್ಶನ ಇತ್ಯಾದಿಗಳ ಮೂಲಕ ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕು ಎಂದರು.
ದೇಶದಲ್ಲಿ 2019 ರಿಂದ 2025 ರವರೆಗೆ ಒಟ್ಟು 60,000 ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿದೆ. ಕಳೆದ ಆರು ತಿಂಗಳಲ್ಲಿ 21932 ಅಪಘಾತಗಳು ನಡೆದಿದ್ದು 5000ಕ್ಕೂ ಅಧಿಕ ಜೀವಗಳು ಅಪಘಾತದಲ್ಲಿ ಕಳೆದುಕೊಂಡಿದ್ದೇವೆ. ತುಮಕೂರಲ್ಲಿ ಜಿಲ್ಲೆಯಲ್ಲಿ ಅಧಿಕ ರಸ್ತೆ ಅಪಘಾತಗಳು ನಡೆಯುತ್ತಿವೆ. ದಾರಿಹೋಕರ ಮೇಲೆ ವಾಹನ ಅಪಘಾತವುಗಳು ಶೇಕಡ 28 ರಷ್ಟಿವೆ. ಕಳೆದ ಒಂದು ವರ್ಷದಲ್ಲಿ 33,000 ಅಪಘಾತಗಳು ಜರುಗಿದ್ದು, 12 ಸಾವಿರ ಜನರು ಮರಣ ಹೊಂದಿದ್ದಾರೆ, 50 ಸಾವಿರ ಜನರು ತೀವ್ರತರದ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಪ್ರತಿ ತಾಸಿಗೆ 15-20 ಜೀವಗಳು ಅಪಘಾತದಲ್ಲಿ ಹೋಗುತ್ತಿವೆ ಎಂದು ಮಾಹಿತಿ ನೀಡಿದರು.ಸಾರಿಗೆ ಇಲಾಖೆಯ ಆಯುಕ್ತರಾದ ಯೋಗೇಶ್ ಗೌಡ, ಹೆಚ್ಚುವರಿ ಆಯುಕ್ತಾರದ ಮಲ್ಲಿಕಾರ್ಜುನ್, ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾ ರೆಡ್ಡಿ ವಿಸಿಯಲ್ಲಿದ್ದರು. ಗದಗ ಜಿಲ್ಲೆಯಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ ಎಸ್ ಶಿವನಗೌಡರ ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 