ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

National Science Day Celebration at Central Jail Belgaum

 ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ  

ಬೆಳಗಾವಿ 01: ಭಾರತದಲ್ಲಿ ಪ್ರತಿ ವರ್ಷ ಪೆಬ್ರುವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತಿದ್ದು, ಸಮಾಜದಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರೀಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸುವುದು ನಮ್ಮ ದೇಶದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ಸಹಾಯಕ ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರ ಅವರು ಹೇಳಿದರು. 

ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ದಿ.28ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಬ್ಬಂದಿಯವರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡುತ್ತಿದ್ದರು. 

 ಭಾರತದ ಶ್ರೇಷ್ಟ ವಿಜ್ಞಾನಿ ಹಾಗೂ ಎಷ್ಯಾದಲ್ಲಿ ವಿಜ್ಞಾನ ವಿಷಯದಲ್ಲಿ ಪರಮೋಚ್ಚ ನೋಬೆಲ್ ಪಾರಿತೋಷಕ ಪಡೆದ ಕೀರ್ತಿಗೆ ಪಾತ್ರರಾದ ಸರ್ ಸಿ.ವಿ.ರಾಮನ್ ಇವರ ರಾಮನ್ ಪರಿಣಾಮದ ಅವಿಷ್ಕಾರವನ್ನು ಸ್ಮರಣೀಯವಾಗಿರಿಸಲು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಯನ್ನು ಆಚರಿಸಲಾಗುತ್ತಿದೆ. ಮೊದಲ ಬಾರಿಗೆ 1987 ಫೆಬ್ರುವರಿ 28 ರಂದು ಆಚರಿಸಲಾಯಿತು.  

ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಮಾನ್ಯರಲ್ಲಿ ಅರಿವು ಮೂಡಿಸುವುದೆ    ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.  

 ಜೈಲರ್‌ಗಳಾದ ರಾಜೇಶ ಧರ್ಮಟ್ಟಿ, ಬಸವರಾಜ ಭಜಂತ್ರಿ, ಎಪ್ ಟಿ ದಂಡೈನವರ ಹಾಗೂ ಆರ್ ಬಿ ಕಾಂಬಳೆ ಮತ್ತು ಸರ್ವ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.