ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್: ಆಕಾಶ್ ಗುಡಗೇನಟ್ಟಿಗೆ ಚಿನ್ನದ ಪದಕ
National Shooting Championship: Akash Gudagenatti wins gold medal
ಬೆಳಗಾವಿ 22: ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಬಿಎ ವಿದ್ಯಾರ್ಥಿ ಹಾಗೂ ಎನ್‌ಸಿಸಿ ಘಟಕದ ಸೀನಿಯರ್ ಅಂಡರ್ ಆಫೀಸರ್ ಆಕಾಶ್ ಸತೀಶ್ ಗುಡಗೇನಟ್ಟಿ ಕೇರಳದ ತಿರುವನಂತಪುರಂನಲ್ಲಿ ಜರುಗಿದ 33ನೇ ಜಿ.ವಿ. ಮವಲಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಹಾಗೂ ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ್ದ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ಅದ್ವಿತೀಯ ಸಾಧನೆ ಮಾಡಿದ್ದರು.
ಈ ಪಂದ್ಯಾವಳಿಯಲ್ಲಿ ಆಕಾಶ್ 600 ಅಂಕಗಳಲ್ಲಿ 535 ಅಂಕಗಳನ್ನು ಗಳಿಸಿ, ಭಾರತಾದ್ಯಂತದ 18 ಯುವ ಶೂಟರ್‌ಗಳ ಪೈಕಿ ಅಗ್ರಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಜೂನಿಯರ್ ಹಾಗೂ ಸೀನಿಯರ್ ಎರಡೂ ವಿಭಾಗಗಳಲ್ಲಿ ಚಿನ್ನದ ಪದಕ ಗೆದ್ದು ಕರ್ನಾಟಕದ ಪ್ರಥಮ ಎನ್‌ಸಿಸಿ ಕೆಡೆಟ್ ಎಂಬ ಕೀರ್ತಿಗೆ ಪಾತ್ರರಾಗಿದ್ದರು.
ಈ ಸಾಧನೆಗೆ ವಿದ್ಯಾರ್ಥಿ, ಶಿಕ್ಷಕ ವೃಂದ, ಎನ್‌ಸಿಸಿ ಅಧಿಕಾರಿಗಳು ಹಾಗೂ ಕೆಎಲ್‌ಇ ಸಂಸ್ಥೆಯ ಮುಖಂಡರಿಂದ ಪ್ರಶಂಸೆ ವ್ಯಕ್ತವಾಗಿತ್ತು.
ಈಗ, ಆಕಾಶ್ ಅವರ ಸಾಧನೆಯನ್ನು ರಾಜ್ಯ ಸರ್ಕಾರವೂ ಮೆಚ್ಚಿಕೊಂಡಿದೆ. ಆಗಸ್ಟ್ 21ರಂದು ಬೆಳಗಾವಿಯ 26ನೇ ಕರ್ನಾಟಕ ಎನ್‌ಸಿಸಿ ಬಟಾಲಿಯನ್ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಮಾಂಡಿಂಗ್ ಆಫೀಸರ್ ಕರ್ನಲ್ ಸುನಿಲ್ ದಾಗರ್ ಅವರು ಆಕಾಶ್ ಗುಡಗೇನಟ್ಟಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.
ಲೆಫ್ಟನಂಟ್ ಕರ್ನಲ್ ಸಿದ್ದಾರ್ಥ ರೆಡು, ಎನ್‌ಸಿಸಿ ಅಧಿಕಾರಿ ಮೇಜರ್ ಮಹೇಶ್ ಗುರನಗೌಡರ್ ಹಾಗೂ ಎಸ್.ಎಂ. ಕಲ್ಲಪ್ಪ ಪಾಟೀಲ ಉಪಸ್ಥಿತರಿದ್ದರು. ಆಕಾಶ್ ಅವರ ಈ ಸಾಧನೆ ರಾಜ್ಯಕ್ಕೆ ಕೀರ್ತಿ ತಂದುಕೊಟ್ಟಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲೂ ಚಿನ್ನದ ಪದಕಗಳನ್ನು ಗೆಲ್ಲುವ ವಿಶ್ವಾಸವನ್ನು ಹುಟ್ಟಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 