ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್: ತೈಯಬಾ ಪಠಾಣ ಡಬಲ್ ಚಿನ್ನದ ಪದಕ
National Skating Championship: Taiba Pathana wins double gold medal
ಲೋಕದರ್ಶನ ವರದಿ,
ಜಮಖಂಡಿ 25: ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ 8ನೇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ಜಮಖಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ತೈಯಬಾ ಮಹ್ಮದರಫೀಕ್ ಪಠಾಣ 500 ಮೀಟರ್ ಹಾಗೂ 1000 ಮೀಟರ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಡಬಲ್ ಚಿನ್ನದ ಪದಕ ಗೆದ್ದು ರಾಜ್ಯ ಹಾಗೂ ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ.
ರೈಲ್ವೆ ಮೈದಾನ ಸ್ಕೇಟಿಂಗ್ ರಿಂಕ್, ಭಯ್ಯಾ ಚೌಕ್, ಸೋಲಾಪುರದಲ್ಲಿ ಜೂನ್ 21ರಂದು ನಡೆದ ಸ್ಪರ್ಧೆಯಲ್ಲಿ ತೈಯಬಾ ಪಠಾಣ ಅತ್ಯುತ್ತಮ ಪ್ರದರ್ಶನ ನೀಡಿ ಎರಡೂ ವಿಭಾಗಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದರು. ಅವರ ಈ ಸಾಧನೆಯನ್ನು ಗುರುತಿಸಿ ಶ್ರೀಲಂಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ಗೆ ಆಯ್ಕೆ ಮಾಡಲಾಗಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪೋಷಕರು, ಕ್ರೀಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 