ರಾಷ್ಟ್ರೀಯ ಕ್ರೀಡಾ ದಿನಾಚರಣೆ : ಧ್ಯಾನಚಂದ್‌ರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ
National Sports Day: Dhyan Chand's achievements inspire young athletes
ಲೋಕದರ್ಶನ ವರದಿ
ಧಾರವಾಡ 29: ಮೇಜರ್ ಧ್ಯಾನಚಂದ್ ಅವರು ಹಾಕಿ ಕ್ರೀಡೆಯಲ್ಲಿ ತಮ್ಮ ಅದ್ಭುತ ಪ್ರತಿಭೆ ಹಾಗೂ ಆಟದ ವೈಖರಿಯ ಮೂಲಕ ವಿಶ್ವದ ಗಮನ ಸೆಳೆದಿದ್ದರು. ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಒಲಿಂಪಿಕ್ಸ್ ಹಾಕಿ ಕ್ರೀಡಾಕೂಟದಲ್ಲಿ ಭಾರತ ತಂಡದ ಪರ ಅವರು ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತಂದರು ಎಂದು ಹುಬ್ಬಳ್ಳಿ-ಧಾರವಾಡ (ಪಶ್ಚಿಮ) ವಿಧಾನ ಸಭೆ ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಹೇಳಿದರು.
ಅವರು ಇಂದು (ಅ.29) ಬೆಳಿಗ್ಗೆ ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಂಡಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ನೂತನವಾಗಿ ನಿರ್ಮಿಸಿದ ಸಿಂಥೇಟಿಕ್ ಬಾಸ್ಕೇಟ್ ಬಾಲ್ ಮೈದಾನ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಅವರ ಆಟದ ವೈಖರಿಯಿಂದ ಪ್ರಭಾವಿತರಾದ ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಅವರು ಧ್ಯಾನಚಂದ್ ಅವರಿಗೆ ಜರ್ಮನಿಯ ಪೌರತ್ವ ನೀಡುವುದಾಗಿ ಘೋಷಿಸಿದ್ದರು. ಆದರೆ ಧ್ಯಾನಚಂದ್ ಅವರು ಜರ್ಮನಿಯ ಪೌರತ್ವವನ್ನು ತಿರಸ್ಕರಿಸಿ ಭಾರತಕ್ಕೆ ಮರಳಿದರು.ಹಾಕಿ ಕ್ಷೇತ್ರದಲ್ಲಿ ಮೇಜರ್ ಧ್ಯಾನಚಂದ್ ಅವರು ಸಲ್ಲಿಸಿದ ಅಮೂಲ್ಯ ಸೇವೆ ಹಾಗೂ ಅವರ ಕ್ರೀಡಾ ಸಾಧನೆಯನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಅವರ ಜೀವನ ಮತ್ತು ಸಾಧನೆಗಳು ದೇಶದ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು.
ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ 10 ಸಾಧಕರಿನ್ನು ಸನ್ಮಾನಿಸಲಾಯಿತು. 31-ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರವನ್ನು ಹಾಗೂ ಇತ್ತೀಚಿಗೆ ನಿವೃತ್ತರಾದ ಹಿರಿಯ ಬಾಸ್ಕೆಟ್ ಬಾಲ್ ತರಬೇತುದಾರ ಪಿ.ಕೆ.ಹಾಸನ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಬಾಸ್ಕೆಟ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ 10 ಪುರುಷ ಮತ್ತು ಮಹಿಳಾ ತಂಡಗಳ ಕ್ರೀಡಾಪಟುಗಳಿಗೆ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಟ್ರೋಫಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಾಯಿ ಬಾಸ್ಕೇಟ್ ಬಾಲ್ ತರಬೇತುದಾರ ಆರ್.ಕೆ.ಮೊಕಾಶಿ, ಹಿರಿಯ ಜಿಮ್ನಾಸ್ಟಿಕ್ ತರಬೇತುದಾರ ವಸಂತ ಮುರ್ತಗುಡ್ಡೆ, ಹಿರಿಯ ಅಥ್ಲೇಟಿಕ್ಸ್ ತರಬೇತುದಾರ ರಾಮಚಂದ್ರ ಪಡತಾರೆ, ನಿವೃತ್ತ ಹಿರಿಯ ಬಾಸ್ಕೇಟ್ ಬಾಲ್ ತರಬೇತುದಾರ ಪಿ.ಕೆ.ಹಾಸನ್, ಭಾರತೀಯ ಕ್ರೀಡಾ ಪ್ರಾಧಿಕಾರದ ಕುಸ್ತಿ ತರಬೇತುದಾರ ಶಂಕರ ಪೂಜಾರಿ ಅವರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ.ಹೆಚ್.ಅಮರಾಪೂರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪಾರ್ಸುನಾಥ ಪಾರಿಸವಾಳ ಅವರು ಕಾರ್ಯಕ್ರಮ ನಿರೂಪಿಸಿದರು. ಎಸ್. ಜಿ. ಭಾವಿಕಟ್ಟಿ ಅವರು ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 