ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಟೇಬಲ್ ಟೆನಿಸ್ ಕ್ರೀಡಾಕೂಟ
National Sports Day Celebration: Table Tennis Tournament
ಬೆಳಗಾವಿ 29: ಇಲ್ಲಿನ ಎಸ್. ಜಿ. ಬಾಳೇಕುಂದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯಡಾ. ಬಿ. ಆರ್. ಪಟಗುಂಡಿ ವಹಿಸಿದ್ದರು. ಉಪಪ್ರಾಚಾರ್ಯ ಡಾ. ಅಶೋಕ್ ಉಳುಗಬಾಳಿ, ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ. ಮಂಜುನಾಥ್ ಶರಣಪ್ಪ ನವರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಧರ ನೇಮಗೌಡ, ಸ್ಪೋರ್ಟ್ಸ ಕೋ-ಆರ್ಡಿನೇಟರ್ ಆನಂದ್ ಬಂಕದ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಂಯೋಜಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕ್ರೀಡೆಯ ಮಹತ್ವ, ದೈಹಿಕ ಸದೃಢತೆ ಮತ್ತು ಯುವಜನತೆಯಲ್ಲಿ ಕ್ರೀಡಾಸ್ಫೂರ್ತಿ ಬೆಳೆಸುವ ಅಗತ್ಯತೆಯ ಕುರಿತು ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಟೇಬಲ್ ಟೆನಿಸ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 