ಬಿಎಲ್ಡಿಇ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
National Sports Day Celebration at BLDE University
ವಿಜಯಪುರ 31: ನಗರದ ಬಿ.ಎಲ್.ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮೇಜರ್ ಧ್ಯಾನ್ಚಂದ್ ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 28ರಿಂದ 30ರವರೆಗೆ ಮೂರು ದಿನಗಳ ಕಾಲ ವಿವಿಧ ಕ್ರೀಡಾ ಚಟುವಟಿಕೆಗಳೊಂದಿಗೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಚಾಲನೆ ನೀಡಲಾಯಿತು. ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬಿಎಲ್ಡಿಇ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್. ಕೋರಿ ಅವರು ಮೇಜರ್ ಧ್ಯಾನ್ಚಂದ್ ಅವರ ಜೀವನ, ಸಾಧನೆ ಹಾಗೂ ಭಾರತೀಯ ಹಾಕಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಕುರಿತು ಮಾತನಾಡಿದರು.
ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ವಿದ್ಯಾರ್ಥಿನಿ ಶ್ರಾವಣಿ ರಾಷ್ಟ್ರೀಯ ಕ್ರೀಡಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಅರೀಜ್ ಅವರಿಗೆ ಅತ್ಯುತ್ತಮ ಮಹಿಳಾ ಕ್ರೀಡಾಪಟು ಹಾಗೂ ಮಿತಾಂಶು ಪಾಟೀಲ ಅವರಿಗೆ ಅತ್ಯುತ್ತಮ ಪುರುಷ ಕ್ರೀಡಾಪಟು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳಿಕ ಫಿಟ್ ಇಂಡಿಯಾ ವಾಕ್ಥಾನ್ ಆಯೋಜಿಸಲಾಯಿತು. ಎರಡನೇ ದಿನ ವಿದ್ಯಾರ್ಥಿಗಳಿಗಾಗಿ ‘ಏಕ್ ಘಂಟಾ ಖೇಲ್ ಕೆ ಮೈದಾನ್ ಮೇ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ ನಿರೂಪಿಸಿದರು. ಕ್ರೀಡಾ ವಿಭಾಗದ ಡೀನ್ ಡಾ. ಗೀರೀಶ್ ಕುಲ್ಲೊಳ್ಳಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 