ಬಳ್ಳಾರಿಯಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನ
National Surgeons' Week Celebration in Bellary: Health Awareness Street Play Performed by Medical St
ಲೋಕದರ್ಶನ ವರದಿ
ಬಳ್ಳಾರಿ 09: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಸಾಪ್ತಾಹಿಕ ಆಚರಣೆ ಅಂಗವಾಗಿ ಮಂಗಳವಾರ ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ) ಆವರಣದ ತುರ್ತು ಚಿಕಿತ್ಸಾ ವಿಭಾಗದ ಮುಂಭಾಗದಲ್ಲಿ ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ಕರ್ನಾಟಕ ರಾಜ್ಯ ಭಾಗದ - ಬಳ್ಳಾರಿ ಶಾಖೆಯ ವತಿಯಿಂದ ಅರ್ಥಪೂರ್ಣ ಬೀದಿ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಇಂಟರ್ನ್ಸ್ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಅತ್ಯಂತ ಯಶಸ್ವಿಯಾಗಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ವಿದ್ಯಾರ್ಥಿಗಳ ಈ ಸಾಮಾಜಿಕ ಕಳಕಳಿ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ತೋರಿದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ವೈದ್ಯರಾದ ಡಾ.ಶೇಕಪ್ಪ ಸಿ. ಮಳಗಿಮನಿ, ಡಾ.ಮಹೇಶ್ ಎಸ್. ದೇಸಾಯಿ, ಡಾ. ರಾಜಶೇಖರ ಗೌಡ ಹಾಗೂ ಡಾ. ಶೈಖ್ ಫರ್ಹಾನ್ ಎಂ.ಬಿ ಅವರು ಮುಕ್ತಕಂಠದಿಂದ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕೆಎಸ್‌ಸಿಎಎಸ್‌ಐ - ಬಳ್ಳಾರಿ ಶಾಖೆಯ ಅಧ್ಯಕ್ಷ ಡಾ.ಶೇಕಪ್ಪ ಮಾಳಗಿಮನಿ, ಕಾರ್ಯದರ್ಶಿ ಡಾ.ಗುಡೇಕೋಟೆ ರವಿಕುಮಾರ, ಜಂಟಿ ಕಾರ್ಯದರ್ಶಿ ಡಾ.ಶೈಖ್ ಫರ್ಹಾನ್ ಎಂ.ಬಿ., ಎಎಸ್‌ಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ದಿವಾಕರ್ ಗಡ್ಡಿ ಹಾಗೂ ಕೆಎಸ್‌ಸಿಎಎಸ್‌ಐ ಖಜಾಂಚಿ ಡಾ.ವೈ.ಗುರುಬಸವನ ಗೌಡ ಸೇರಿದಂತೆ ಶಸ್ತ್ರಚಿಕಿತ್ಸಾ ವಿಭಾಗದ ಉಪನ್ಯಾಸಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತುರ್ತು ಚಿಕಿತ್ಸಾ ವಿಭಾಗಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಶಾಂತಚಿತ್ತರಾಗಿ ಬೀದಿ ನಾಟಕವನ್ನು ವೀಕ್ಷಿಸಿದರು. ವಿದ್ಯಾರ್ಥಿಗಳ ಅಭಿನಯ ಹಾಗೂ ಸಂದೇಶಕ್ಕೆ ಚಪ್ಪಾಳೆಗಳ ಮುಖಾಂತರ ಭಾರಿ ಪ್ರಶಂಸೆ ವ್ಯಕ್ತಪಡಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 