ರಾಷ್ಟ್ರೀಯ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ
National Swachhta He Seva Campaign launched
ಹಾವೇರಿ 30: ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡಲ್ಲಿ ಯಾವುದೇ ಕಾಯಿಲೆಗಳು ಬರುವುದಿಲ್ಲ. ಶಾಲಾ ಹಂತದಿಂದಲೇ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವೀಂದ್ರ್ಪ ಎನ್ ಅವರು ಹೇಳಿದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಖಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ ಹಾಗೂ ಹಾವೇರಿ ನಗರಸಭೆ ಸಹಯೋಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತಾ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ನಮ್ಮ ಮನೆ, ಕಚೇರಿ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡರೇ ನಮ್ಮ ದೇಶ ಸ್ವಚ್ಛವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ಶ್ರೀಮತಿ ಅಶ್ವಿನಿ ವಿಜಯ ಶಿರಿಯಣ್ಣನವರ, ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಶ್ರೀಮತಿ ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಎಚ್.ವಿ., ನ್ಯಾಯಾಧೀಶರಾದ ಆಕರ್ಷಕ ಎಂ., ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ.ದೊಡ್ಡಗೌಡರ, ಶಿರಸ್ತೇದಾರ ಬೇನಾಳ, ನ್ಯಾಯಾಲಯಗಳ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 