ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
National Tobacco Control Program
ಲೋಕದರ್ಶನ ವರದಿ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಹಾವೇರಿ 05 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳವರಿಗೆ "ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ" ಮತ್ತು "ಕೋಟ್ರಾ ಕಾಯ್ದೆ-2003" ಮತ್ತು "ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಮತ್ತು ಚಿಕಿತ್ಸೆ ಸೌಲಭ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಗುರುವಾರ ಹಾವೇರಿ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ ಜಗದೀಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರ, ಅಬಕಾರಿ ಉಪ ಆಯುಕ್ತರಾದ ಕುಮಾರಿ ವನಜಾಕ್ಷಿ ಎಮ್ ಇತರರು ಭಾಗವಹಿಸಿದ್ದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಡಾ.ಸಂತೋಷ ದಡ್ಡಿ ಮತ್ತು ದಾದಾಪೀರ ಹುಲಿಕಟ್ಟಿ ಅವರು ತರಬೇತಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಕಾರ್ಯಚಟುವಟಿಕೆ, ತಂಬಾಕು ಸೇವನೆಯ ದುಷ್ಪರಿಣಾಮ ಮತ್ತು ಕೋಟ್ಟಾ-2003ರ ಕಾಯ್ದೆ ಅನುಷ್ಠಾನದ ಕುರಿತು ಉಪನ್ಯಾಸ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 