ರಾಷ್ಟ್ರೀಯ ಏಕತಾ ದಿವಸ: ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ: ರಾಷ್ಟ್ರೀ ಏಕತಾ ದಿವಸ ಅಂಗವಾಗಿ ಜಿಲ್ಲಾಧಿಕಾರಿಗಳ ಮುಖ್ಯ ಸಭಾಂಗಣದಲ್ಲಿಂದು ರಾಷ್ಟ್ರದ ಐಕ್ಯತೆ, ಸಮಗ್ರತೆ, ಭದ್ರತೆ ಮತ್ತು ರಾಷ್ಟ್ರೀಯ ಏಕೀಕರಣದ ಸ್ಪೂತರ್ಿಯನ್ನು  ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಭೋಧಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.