ಬಾಗಲಕೋಟೆ೩೧: ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಸಮ್ಮುಖದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರತಿಜ್ಞಾವಿಧಿಯಲ್ಲಿ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ತನ್ನನ್ನು ತಾನು ಅಪರ್ಿಸಿಕೊಳ್ಳಬೇಕು. ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸಬೇಕು. ಸದರ್ಾರ ವಲ್ಲಭಬಾಯ್ ಪಟೇಲರ ದೂರದೃಷ್ಠಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂತರ್ಿಯನ್ನು ಕಾಪಾಡಿಕೊಳ್ಳುವಂತೆ ಹಾಗೂ ರಾಷ್ಟ್ರದ ಭದ್ರತೆಯನ್ನು ಖಾತ್ರಿ ಪಡಿಸಲು ತನ್ನದೇ ಆದ ಕೊಡುಗೆಯನ್ನು ನೀಡುತ್ತೇನೆಂದು ಪ್ರತಿಜ್ಞೆ ಮಾಡಿಸಲಾಯಿತು. ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.