ಕೊಪ್ಪಳ ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ
National Unity Pledge accepted by Koppal District Administration
ಕೊಪ್ಪಳ 19 : ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬುಧವಾರ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸಲಾಯಿತು. ಪ್ರತಿ ವರ್ಷದಂತೆ ನವೆಂಬರ್ 19 ರಿಂದ ನ. 25 ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದಂತೆ ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು. ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಐಕ್ಯತಾ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ತಹಶಿಲ್ದಾರ ವಿಠಲ ಚೌಗಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 