ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಇಂದು ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ನ. 19 ರಿಂದ 25ರವರೆಗೆ ``ರಾಷ್ಟ್ರೀಯ ಐಕ್ಯತಾ ಸಪ್ತಾಹ''ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಜಿಲ್ಲಾಡಳಿತ ನೀಡಿದ ನಿದರ್ೇಶನದಂತೆ ವಾರ್ತಾ ಇಲಾಖೆಯಲ್ಲಿ ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಜಿ. ಸುರೇಶ ಅವರು ಪ್ರಮಾಣ ವಚನ ಬೋಧಿಸಿದರು. ಎಂ. ಅವಿನಾಶ್, ಅರುಣಾ ಭೋಗಿ, ಎಂ. ಪಾಂಡುರಂಗ ಸೇರಿದಂತೆ ಕಚೇರಿಯ ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.