ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಭಾವೈಕ್ಯ ಸಪ್ತಾಹ
National Unity Week at Government First Grade College
ಮೂಡಲಗಿ 23: ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಗೋಕಾಕ ಅವರ ಸಹಯೋಗದಲ್ಲಿ ಮಹಾವಿದ್ಯಾಲಯದ ಐ.ಕ್ಯೂ. ಎ. ಸಿ ಘಟಕದ ಅಡಿಯಲ್ಲಿ ವಿದ್ಯಾರ್ಥಿ ವೇತನ ವಿಭಾಗ ಹಾಗೂ ಪರಿಶಿಷ್ಟ ಜಾತಿ, ಪಂಗಡ ಘಟಕದ ವತಿಯಿಂದ ರಾಷ್ರೀಯ ಭಾವ್ಯಕ್ಯ ಸಪ್ತಾಹದ ಅಂಗವಾಗಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ದೃಢೀಕರಣ ಕ್ಯಾಂಪ್ ಅನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಒಂದು ನೂರು ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ದೃಢೀಕರಣವನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಹೇಶ ಕಂಬಾರ ಅವರು ಮಾತನಾಡುತ್ತ, ಮಹಾವಿದ್ಯಾಲಯದ ವಿದ್ಯಾರ್ಥಿ ವೇತನ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿ ವೇತನದ ಸಂಯೋಜಕ ಚೇತನ್ ರಾಜ್ ಅವರು ಬಯೋಮೆಟ್ರಿಕ್ ದೃಢೀಕರಣ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಘಟಕದ ಸಂಯೋಜಕ ಸುಜಾತ ಪುಡ್ಲಕಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂಡಲಗಿಯ ವರ್ಣಾ ಕಮ್ಯೂನಿಕೇಶನ್ ಗ್ರಾಮ್ ಒನ್ ಕೇಂದ್ರದ ಪ್ರಶಾಂತ ಹೊಸಮನಿ ಅವರು ತಾಂತ್ರಿಕ ಸಹಾಯ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 