ಕೊಪ್ಪಳ 25: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ``ಸದೃಢ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಾಕ್ಷರತೆ'' ಎಂಬ ಸಂದೇಶಯುಳ್ಳ ಐದು ಸಾವಿರ ವಿದ್ಯಾರ್ಥಿಗಳನ್ನೊಳಗೊಂಡ ಬೃಹತ್ ಮಾನವ ಸರಪಳಿ ನಿರ್ಮಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಇಂದು (ಜ.25) ನಗರದ ಶ್ರೀ ಗವಿಸಿದ್ದೇಶ್ವರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ವಿದ್ಯಾಥರ್ಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ನಂತರ ಮಾತನಾಡಿ, ಪ್ರತಿ ವರ್ಷ ಜನವರಿ. 01ಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವವರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಸಬೇಕು. ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ಜನವರಿ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸುತ್ತದೆ. ಈ ನಿಟ್ಟಿನಲ್ಲಿ ``ಸದೃಢ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಾಕ್ಷರತೆ'' ಎಂಬ ಧ್ಯೇಯ ವಾಕ್ಯದೊಂದಿಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿ.ಪಂ. ಉಪ ಕಾರ್ಯದಶರ್ಿ ಎನ್.ಕೆ. ತೋರವಿ, ಯೋಜನಾ ನಿರ್ದೇಶಕ ರವಿ ಬಸರಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್.ಜಿ. ರಾಟಿಮನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ್, ತಹಶೀಲ್ದಾರ ಜಿ.ಬಿ. ಮಜ್ಗಿ ಸೇರಿದಂತೆ ಜಿಲ್ಲಾ ಮಟ್ಡದ ಅಧಿಕಾರಿಗಳು, ಶಾಲಾ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ 5000 ವಿದ್ಯಾರ್ಥಿಗಳಿಂದ ``ಸದೃಢ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಾಕ್ಷರತೆ'' ಧ್ಯೇಯ ವಾಕ್ಯ ಇರುವ ಮತ್ತು ಕೈ ಬೆರಳಿನ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳ ತಾತ್ಕಾಲಿಕ ರೇಖಾಚಿತ್ರ ಹಾಳೆಗಳನ್ನು ಬಳಸಿ ವಿದ್ಯಾರ್ಥಿಗಳಿಂದ ರಚಿತವಾದ ಬೃಹತ್ ಮಾನವ ಸರಪಳಿ ವಿಶೇಷವಾಗಿತ್ತು. ರಾಷ್ಟ್ರೀಯ ಮತದಾರ ದಿನಾಚರಣೆಯ ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಪ್ರೌಡ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾಥರ್ಿಗಳಿಗೆ ಅಭಿನಂದನ ಪತ್ರಗಳನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು.