ಯಮಕನಮರಡಿ 24: ಸ್ಥಳೀಯ ಸರಕಾರಿ ಪದವಿ ಪೂರ್ವ ಮಾಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಎನ.ಎಸ್.ಎಸ್.ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್ ತಬರಿ ಇವರು ಮಾತನಾಡಿ ಮತದಾನದ ಮಹತ್ವ ಮತದಾನ ಪ್ರಕ್ರಿಯೆ ಯುವಕರು ಮತದಾನ ಪ್ರಕ್ರಿಯಯಲ್ಲಿ ಹೆಚ್ಚಿಗೆ ತೊಡಗಿಕೊಂಡು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ, ಎ.ಎ.ಕಿವಂಡಾ ಹಾಗೂ ಕಾಲೇಜಿನ ಎಲ್ಲ ಬೋಧಕ ಸಿಬ್ಬಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲ ಸಿಬ್ಬಂದಿಗಳು ಮತದಾರರ ದಿನದ ಪ್ರತಿಜ್ಞೆ ಸ್ವೀಕರಿಸಿದರು.