ಕೊಪ್ಪಳ 24: ರಾಷ್ಟ್ರೀಯ ಮತದಾರರ ದಿವಸದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿಭರ್ೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.