ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ

ಬ್ಯಾಡಗಿ11: ಪ್ರತಿಯೊಬ್ಬ ಪಾಲಕರೂ ತಮ್ಮ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಂತು ಹುಳು ನಿವಾರಣಾ ಮಾತ್ರೆಗಳನ್ನು ತಪ್ಪದೇ ಹಾಕುವ ಮೂಲಕ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಕೆ. ರುದ್ರಮುನಿ ಹೇಳಿದರು. 

ಪಟ್ಟಣದ ಎಸ್.ಎಸ್.ಪಿ.ಎನ್.  ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಜಂತು ಹುಳು ನಿರ್ಮೂಲನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಆಲ್ಬೇಂಡೋಜಲ್ ಮಾತ್ರೆಗಳನ್ನು ವಿತರಿಸಿ ಮಾತನಾಡಿದ ಅವರು ಮಕ್ಕಳು ಹೊಟ್ಟೆನೋವು ಎಂದಾಗ ಅದರ ಬಗ್ಗೆ ನಿರ್ಲಕ್ಷ್ಯ ತೋರದೆ ಸಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ ಮಕ್ಕಳ ಆರೋಗ್ಯವನ್ನು ಕಾಪಾಡಲು ಮುನ್ನೆಚ್ಚರಿಕೆ ವಹಿಸಬೇಕು ಎಂದರು. 

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ತಿಮ್ಮಾರೆಡ್ಡಿ ಮಾತನಾಡಿ, ಮಕ್ಕಳು ಆಹಾರ ಸೇವಿಸುವ ಮುನ್ನ ಕೈಗಳ ಸ್ವಚ್ಛತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರಲ್ಲದೆ ಮಕ್ಕಳಿಗೆ ಅನಗತ್ಯ ಆಹಾರಗಳ ಸೇವನೆಯಿಂದ ದೂರವಿರಿಸಿ ಸದೃಡ ಆರೋಗ್ಯಕ್ಕೆ ಕ್ರಮವಹಿಸಲು ತಿಳಿಸಿದರು. 

ಇದೇ ಸಂದರ್ಭದಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ. ಎಫ್. ಬಾಕರ್ಿ, ಶಿಕ್ಷಣ ಸಂಯೋಜಕರಾದ ಬಸವರಾಜ ಸೋಮಕ್ಕಳವರ, ಆರ್.ಎಂ. ಮಳವಳ್ಳಿ, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.