ರಾಷ್ಟ್ರಮಟ್ಟದ ಯುವಜನೋತ್ಸವ
National Youth Festival- Dharwad News
ಧಾರವಾಡ 04 : ದಿನಾಂಕ 03.07.2025 ರಂದು ಜನತಾ ಶಿಕ್ಷಣ ಸಮಿತಿ, ಧಾರವಾಡದ ಕಾರ್ಯಾಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದಾಗ ಲಲಿತ ಕಲಾ ವಿಭಾಗದ ವಿದ್ಯಾರ್ಥಿಗಳ ಸಾಧನೆಯ ವಿವರಗಳನ್ನು ಪಡೆದರು.
ಪ್ರಸ್ತುತ 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಯುವಜನೋತ್ಸವ ಸ್ಪರ್ಧೆಗಳಲ್ಲಿ ಧಾರವಾಡ ವಲಯ ಮಟ್ಟದ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಅಂತರ ವಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಚ್ಚಿನ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ‘ಸಮಗ್ರ ವೀರಾಗ್ರಣಿ’ ಪ್ರಶಸ್ತಿ ಮತ್ತು ‘ಕಂಸಾಯಣ’ ವೆಂಬ ನಾಟಕ ಪ್ರದರ್ಶನಕ್ಕೆ ಕರ್ನಾಟಕ ನಾಟಕ ಅಕಾಡಮಿ, ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ‘ರಂಗದೀಪ್ತಿ’ ಪ್ರಶಸ್ತಿ ಪಡೆದಿರುವ ಬಗ್ಗೆ ಮತ್ತು ಉತ್ತರ ಪ್ರದೇಶದ ಅಮಿತಿ ವಿಶ್ವವಿದ್ಯಾಲಯ, ನೋಯಡದಲ್ಲಿ ಜರುಗಿದ ರಾಷ್ಟ್ರಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಕುಮಾರಿ. ಪ್ರಿಯಾಂಕ ಬಸವ ಇವರು ಪಾಶ್ಚಿಮಾತ್ಯ ಸಂಗೀತ ಗಾಯನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು ಹಾಗೂ ಆರ್.ವಿ. ವಿಶ್ವವಿದ್ಯಾಲಯ, ಬೆಂಗಳೂರು ಇವರು ಆಯೋಜಿಸಿದ ‘ರಂಗತರಂಗ’ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ‘ಕಂಸಾಯಣ’ ಎಂಬ ನಾಟಕ ಪ್ರದರ್ಶನಕ್ಕೆ ಪ್ರಶಂಸೆ ಹಾಗೂ ಕಂಸನ ಪಾತ್ರದಾರಿಯಾದ ವಿದ್ಯಾರ್ಥಿ ಸ್ವರೂಪ ಗಣಪತಿ ಹಬ್ಬು ಅವರಿಗೆ ದೊರೆತ ‘ಅತ್ಯುತ್ತಮ ನಟ’ ಪ್ರಶಸ್ತಿ ಹಾಗೂ ಜಿಲ್ಲಾಮಟ್ಟದ ಹಲವಾರು ಲಲಿತಕಲಾ ಸ್ಪರ್ಧೆಗಳಲ್ಲಿ ಬಹುಮಾನಗಳು, ಪ್ರಶಸ್ತಿಗಳು, ಪ್ರಮಾಣ ಪತ್ರಗಳು, ಟ್ರೋಪಿ, ಶೀಲ್ಡ್, ಪದಕಗಳನ್ನು ವೀಕ್ಷಿಸಿದ ಪೂಜ್ಯರು ಅತ್ಯಂತ ಮೆಚ್ಚುಗೆ ಮತ್ತು ಹರ್ಷವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿ, ಆಶೀರ್ವದಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ಸು ಪಡೆದು ಮಹಾವಿದ್ಯಾಲಯಕ್ಕೆ ಹಾಗೂ ಸಂಸ್ಥೆಗೆ ಕೀರ್ತಿ ತರುವಂತೆ ಸಲಹೆ ನೀಡಿದರು.
‘ಕಂಸಾಯಣ’ ನಾಟಕವನ್ನು ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರದರ್ಶನ ನೀಡಲು ಆಹ್ವಾನಿಸಿದರು. ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ, ಕಾಲೇಜಿನ ಅಭಿವೃದ್ಧಿ ಅಧಿಕಾರಿಗಳಾದ ಡಾ. ಸೂರಜ ಜೈನ್ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಕೆ.ಎಚ್. ನಾಗಚಂದ್ರ, ದೈಹಿಕ ಶಿಕ್ಷಣ ನಿರ್ದೇಶಕರಾದ ಜೆ.ಆರ್. ಕುಂದಗೋಳ ಮತ್ತು ಲಲಿತಕಲಾ ಸಂಘದ ಸಂಯೋಜಕರಾದ ಡಾ. ಅನಿತಾ ಪುರಾಣಿಕ ಉಪಸ್ಥಿತರಿದ್ದರು. ಲಲಿತಕಲಾ ಸಂಘದ ಅಧ್ಯಕ್ಷರಾದ ಟಿ.ಎಂ. ಶ್ರೀಧರ ಇವರು ಸ್ವಾಗತಿಸಿ ಸಂಕ್ಷಿಪ್ತ ವರದಿ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 