ಹೊನ್ನುರಸ್ವಾಮಿ ಕೆ.ಟಿ ಯವರಿಗೆ ರಾಷ್ಟ್ರ ಮಟ್ಟದ ಮಾಧ್ಯಮ ರತ್ನ ಪ್ರಶಸ್ತಿ
National level Madhyamik Ratna Award for Honnuraswamy K.T.
ಬಳ್ಳಾರಿ 22 : ನಗರದಲ್ಲಿ ಜನಮನಸೆಳೆದ ಸಂಜೆವಾಣಿ ದಿನಪತ್ರಿಕೆಯ ಉಪಸಂಪಾದಕರು, ಜನಕೂಗು, ಮತ್ತು ವಿಜಯ ವಿಶ್ವವಾಣಿ ಪತ್ರಿಕೆ ಹಾಗೂ ಬಂಗಾರದ ಗಣಿ ಮತ್ತು ಪಬ್ಲಿಕ್ ನೆಕ್ಸ್ಟ ಚಾನೆಲ್ ಜಿಲ್ಲಾ ವರದಿಗಾರಾದ ಹೊನ್ನುರಸ್ವಾಮಿ ಕೆ.ಟಿ ಯವರಿಗೆ "ಮಾಧ್ಯಮ ರತ್ನ" ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ಕೆಲ ವರ್ಷಗಳಿಂದ ಸಾಧಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ಕೆ ಮುಂದಾಗಿದ್ದು. 120ನೇ ವರ್ಷದ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನದಲ್ಲಿ ಪ್ರತಿವರ್ಷ ಕೊಡಮಾಡುವ ರಾಷ್ಟೀಯ"ಮಾಧ್ಯಮ ರತ್ನ" ಪ್ರಶಸ್ತಿಗೆ ಹೊನ್ನುರಸ್ವಾಮಿ ಕೆ. ಟಿ ಆಯ್ಕೆಯಾಗಿದ್ದರು. ಹೊನ್ನುರಸ್ವಾಮಿ ಕೆ ಟಿ ಯವರು ಮಾಧ್ಯಮ ಕ್ಷೇತ್ರದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದು. ಈ ಹಿನ್ನೆಲೆಯಲ್ಲಿ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸಂಸ್ಥೆಯ 120 ನೇ ರಾಷ್ಟ್ರ ಮಟ್ಟದ ಬೆಳಕು ಸಮ್ಮೇಳನದಲ್ಲಿ ರಾಷ್ಟ್ರ ಮಟ್ಟದ ‘ಮಾಧ್ಯಮ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ.
ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 