ಟೆಕ್ವಾಂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

National level selection in the sport of Taekwondo

ಟೆಕ್ವಾಂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ 

ಧಾರವಾಡ 12: ನಗರದ ಜಿಲ್ಲಾ ಟೆಕ್ವಾಂಡೋ ಅಸೋಸಿಯೆಶನ್ ನ ಅಂಜಲಿ ಪರ​‍್ಪ ಮತ್ತು ಪರ​‍್ಪ ಕೆ. ಅವರ ಮಾರ್ಗದರ್ಶನದಲ್ಲಿ ಟೆಕ್ವಾಂಡೋ ತರಬೇತಿ ಹೊಂದಿದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮಿಂಚಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

   ಇತ್ತೀಚೆಗೆ ಡಿ.5 ಮತ್ತು 6 ರಂದು ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳ 2024-25 ನೇ ಸಾಲಿನ ರಾಜ್ಯಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಧಾರವಾಡ ಜಿಲ್ಲೆಯಿಂದ ಸ್ಪರ್ಧಿಸಿ ಬಾಲಕರ ವಿಭಾಗದಲ್ಲಿ ಸಾಯಿಪ್ರಸಾದ ಪಿ.ಕೆ ಮತ್ತು ಬಾಲಕೀಯರ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿ ಮಿಂಚಿ ಬಂಗಾರದ ಪದಕ ಪಡೆಯುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ. 

   ಇವರು ಮುಂಬರುವ ಯು-19 ನ್ಯಾಶನಲ್ ಸ್ಕೂಲ್ ಗೇಮ್ಸ್‌ ಕ್ರೀಡಾಕೂಟಕ್ಕೆ ಆಯ್ಕೆ ಆಗಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ಜಿಲ್ಲಾ ಟೆಕ್ವಾಂಡೋ ಅಸೋಸಿಯೆಶನ್ ಮತ್ತು ಪಾಲಕರು ಅಭಿನಂದಿಸಿದ್ದಾರೆ.