ನೈಸರ್ಗಿಕ ಕೃಷಿಯಿಂದ ಸಮೃದ್ಧ ಗೋಡಂಬಿ ಕೃಷಿ ಸಾಧ್ಯ
Natural farming makes abundant cashew cultivation possible
ಲೋಕದರ್ಶನ ವರದಿ
ಬೆಳಗಾವಿ 12: ಖಾನಾಪುರ ತಾಲೂಕಿನ ಜಾಂಬೋಟಿಯ ಜೇನು ಕೃಷಿ ತರಬೇತಿ ಕೇಂದ್ರದಲ್ಲಿ "ಚೇತ್ ಬಚಾವೋ" ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ "ನೈಸರ್ಗಿಕ ಕೃಷಿ ಮತ್ತು ಸುಸ್ಥಿರ ಪದ್ಧತಿಗಳ ಮೂಲಕ ಲಾಭದಾಯಕ ಹಾಗೂ ಸಮೃದ್ಧ ಗೋಡಂಬಿ ಕೃಷಿ" ಕುರಿತ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಇಂದು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಐಸಿಎಆರ್- ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ, ಕೊಚ್ಚಿಯ ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಹಾಗೂ ಬೆಳಗಾವಿ ತೋಟಗಾರಿಕೆ ಇಲಾಖೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಐಸಿಎಆರ್ ಕೆಎಲ್ಇ- ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಅವರು, "ಸ್ಥಳೀಯ ಗೋಡಂಬಿ ಬೆಳೆಗಾರರ ಆರ್ಥಿಕ ಪ್ರಗತಿಗೆ ವೈಜ್ಞಾನಿಕ ತಂತ್ರಜ್ಞಾನ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಸಮ್ಮಿಲನ ಅಗತ್ಯವಾಗಿದೆ. ರೈತರು ಕೃಷಿ ವಿಜ್ಞಾನ ಕೇಂದ್ರದ ಸಂಪರ್ಕದಲ್ಲಿದ್ದುಕೊಂಡು ತಾಂತ್ರಿಕ ಮಾರ್ಗದರ್ಶನ ಹಾಗೂ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು" ಎಂದು ತಿಳಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 